ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷರಾಗಿ ಲೋಕಿಕೆರೆ ನಾಗರಾಜ್ ನೇಮಕ

ಸಂಜೆವಾಣಿ ವಾರ್ತೆ

ದಾವಣಗೆರೆ. ಫೆ.೯; ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿದ್ದ ಲೋಕಿಕೆರೆ ನಾಗರಾಜ್ ರವರನ್ನು ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಎ ಎಸ್ ಪಾಟೀಲ್ ನಡಹಳ್ಳಿಯವರು ನೇಮಕ ಮಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಿತರಾಗಿದ್ದ ಅವರು ರೈತ ಸಮುದಾಯದ ಪರವಾಗಿ ಜಿಲ್ಲೆಯಲ್ಲಿ ಅನೇಕ ಹೋರಾಟ ನಡೆಸಿದ್ದರು. ಭದ್ರಾ ನೀರಿಗಾಗಿ ಹೋರಾಟ ಮಾಡಿ ಕಳೆದ ಹಂಗಾಮಿನಲ್ಲಿ ಭತ್ತದ ಬೆಳೆಗೆ ನೀರು ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಕರ್ನಾಟಕ ರಾಜ್ಯ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷರಾಗಿಯೂ ಕಳೆದ 1 ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ