ರಾಜ್ಯ ಸರ್ಕಾರದ ಭ್ರಷ್ಟಾಚಾರ; ಜನತೆಗೆ ಉತ್ತರ ನೀಡಲು ಬಿಜೆಪಿ ನಾಯಕರಿಗೆ ಆಗ್ರಹ : ಖೇರಾ

ಬೆಂಗಳೂರು ಮೇ.5- ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಿಜೆಪಿ ರಾಷ್ಟ್ರೀಯ ನಾಯಕರು ರಾಜ್ಯದ ಜನತೆಗೆ ಉತ್ತರಿಸಲಿ ಎಂದು ಎಐಸಿಸಿ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಪವನ್ ಖೇರಾ ಇಂದಿಲ್ಲಿ ಆಗ್ರಹಿಸಿದ್ದಾರೆ.

ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ರಾಜ್ಯದ ಜನ ಬೇಸತ್ತಿದ್ದು, ಈ ಚುನಾವಣೆಯಲ್ಲಿ ಜನ ಈ ಶೇ40 ಕಮಿಷನ್ ಸರ್ಕಾರವನ್ನು ತೆಗೆಯಲಿದ್ದಾರೆ ಎಂದಿದ್ದಾರೆ.

ರೈತರು, ಮಹಿಳೆಯರು, ಯುವಕರು, ಕಾರ್ಮಿಕರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳು ಈ ಶೇ. 40 ಸರ್ಕಾರದ ದುರಾಡಳಿತಕ್ಕೆ ಬಲಿಯಾಗಿವೆ. ಬಿಜೆಪಿ ರಾಷ್ಟ್ರೀಯ ನಾಯಕರು ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪ್ರವಾಸ ಮಾಡುತ್ತಿದ್ದು, ಉಳಿದ ನಾಲ್ಕು ದಿನಗಳಲ್ಲಿ ಈ ನಾಯಕರು ಉತ್ತರ ನೀಡಲಿ ಎಂದಿದ್ದಾರೆ.

ಕೆಪಿಸಿಸಿ ವಕ್ತಾರ ರಮೇಶ್ ಬಾಬು ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ರೇಟ್ ಕಾರ್ಡ್ ಬಗ್ಗೆ ಇದುವರೆಗೂ ಯಾವ ಬಿಜೆಪಿ ನಾಯಕರು ಉತ್ತರ ನೀಡುತ್ತಿಲ್ಲ. ಈ ಭ್ರಷ್ಟಾಚಾರದ ವಿಚಾರದಿಂದ ಜನರ ಗಮನ ಬೇರೆಡೆ ಸೆಳೆಯಲು ಮೋದಿ ನಾಯಕತ್ವದಲ್ಲಿ ಬಿಜೆಪಿ ನಾಯಕರು ಭಾವನಾತ್ಮಕ ವಿಚಾರ ಬಳಸುತ್ತಿದ್ದಾರೆ ಎಂದಿದ್ದಾರೆ.

ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ರೇಟ್ ಕಾರ್ಡ್ ಮೂಲಕ ಕೆಲವು ಪ್ರಶ್ನೆ ಇಡುತ್ತಿದ್ದೇವೆ. ಮೋದಿ, ಅಮಿತ್ ಶಾ, ನಡ್ಡಾ, ಶೇ 40 ರಷ್ಡು ಪೇಸಿಎಂ ಬೊಮ್ಮಾಯಿ ಅವರು ಈ ಪ್ರಶ್ನೆಗಳಿಗೆ ಉತ್ತರ ನೀಡಬೇಕು ಎಂದಿದ್ದಾರೆ.

ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾಹಿತಿ ನೀಡಿಬಿಜೆಪಿ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ಬಿಜೆಪಿ ನಾಯಕರು ಮಾಡಿರುವ ಆರೋಪದ ಬಗ್ಗೆ ಎಲ್ಲಾ ದಿನಪತ್ರಿಕೆಗಳಲ್ಲಿ ವಿವರ ಪ್ರಕಟಣೆ ಬಂದಿದ್ದು, ಈ ವಿಚಾರವಾಗಿ ಬಿಜೆಪಿ ನಾಯಕರುಗಳು ರಾಜ್ಯದ ಜನರಲ್ಲಿ ಬೆಳಕು ಚೆಲ್ಲಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತೊಬ್ಬ ನಾಯಕಿ ಐಶ್ವರ್ಯ ಮಹದೇವ್, ಪ್ರಧಾನಿ ನರೇಂದ್ರ ಮೋದಿ ಅವರು ಅಚ್ಛೇ ದಿನ, ವಿಕಾಸದ ಬಗ್ಗೆ ಮಾತನಾಡುತ್ತಾರೆ. ಆದರೆ ರಾಜ್ಯದ ವಿಚಾರಕ್ಕೆ ಬಂದರೆ ಕೇವಲ ವೈಯಕ್ತಿಕ ವಿಚಾರಗಳ ಬಗ್ಗೆ ಮಾತ್ರ ಯಾಕೆ ಮಾತನಾಡುತ್ತಾರೆ ಎಂದಿದ್ದಾರೆ.