ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಸೆ.08: ನಗರದ ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ ಭವನದ ಮುಂದೆ.  ಇಂದು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ದ ಬಿಜೆಪಿ ಪ್ರತಿಭಟನೆ ನಡೆಸಿತು.
ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್, ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ನೇತೃತ್ವದಲ್ಲಿ ರೈತಪರವಾದ ಯೋಜನೆಗಳನ್ನಯ ಮುಂದುವರೆಸಬೇಕು. ರೈತರ ನೀರಾವರಿ ಪಂಪ್ ಸೆಟ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಬೇಕು ಎಂದು  ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಲಾಯ್ತು.
ಮಳೆಯ ಅಭಾವದಿಂದ ಉಂಟಾಗಿರುವ ಬರ ಪರಿಸ್ಥಿಯನ್ನು ಎದುರಿಸಲು ಬರಗಾಲ ಘೋಷಣೆ ಮಾಡಿ ಪರಿಹಾರ ಕಾರ್ಯ ಕೈಗೊಳ್ಳಬೇಕು‌
ಲೋಡ್ ಸೆಡಿಂಗ್ ರದ್ದುಪಡಿಸಿ ನಿರಂತರ ಹಗಲು ಹೊತ್ತಿನಲ್ಲಿ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಬೇಕು.
ಕಿಸಾನ್ ಸಮ್ಮಾನ್ ಯೋಜನೆ ಕೇಂದ್ರ ಸರ್ಕಾರದ ಜೊತೆ ಬಿಜೆಪಿ ರಾಜ್ಯ ಸರ್ಕಾರ ಕೂಡ ಸುಮಾರು 51 ಲಕ್ಷ ರೈತರಿಗೆ ವಾರ್ಷಿಕ ಎರಡು ಕಂತುಗಳಲ್ಲಿ ನಾಲ್ಕು ಸಾವಿರ ಕಿಸಾನ್ ಸಮ್ಮಾನ ನಿಧಿ ಯೋಜನೆ ಜಾರಿಗೆ ತಂದಿತ್ತು ಈಗ ಅದನ್ನು ತಡೆಹಿಡಿದಿರುವ ನಿರ್ಧಾರ ಕೈಬಿಡಬೇಕು ಸೇರಿದಂತೆ  ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಜಾರಿಯಲ್ಲಿದ್ದ ಯೋಜನೆಗಳನ್ನು ಮುಂದುವರೆಸಬೇಕು ಎಂದು ಆಗ್ರಹಿಸಲಾಯ್ತು.
ಈ ವೇಳೆ ಸೋಮಶೇಖರ ರೆಡ್ಡಿಯವರು ಮಾತನಾಡಿ. ರೈತರ ಹಿತ ದೃಷ್ಠಿಯಿಂದ
ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ  ಯೋಜನೆಗಳನ್ನು  ರದ್ದು ಮಾಡುವುದು ಸರಿಯಲ್ಲ.
ಇದು ರೈತ ವಿರೋಧಿ ಜನವಿರೋಧಿ ಸರ್ಕಾರ ಎಂದರು.
ಗ್ಯಾರಂಟಿಗಳ ಅನುಷ್ಠಾನದಲ್ಲಿ ಬಿಜೆಪಿ ಸರ್ಕಾರದ ಯೋಜನೆ ರದ್ದು ಮಾಡಲಾಗ್ತಿದೆ. ಉಚಿತ ಕರೆಂಟ್ ನೀಡ್ತೇವೆ ಎನ್ನುವ ಮೂಲಕ ಲೋಡ್ ಶೆಡ್ಡಿಂಗ್ ಮಾಡಲಾಗ್ತಿದೆ. ಇದಷ್ಟೇ ಅಲ್ಲ ಆರ್ಥಿಕವಾಗಿ ಸರ್ಕಾರ ಮತ್ತಷ್ಟು ಸಂಕಷ್ಟಕ್ಕಿಡಗಲಿದೆಂದರು.
ಪಕ್ಷದ ಜಿಲ್ಲಾ ಅಧ್ಯಕ್ಷ ಗೋನಾಳ್ ಮುರಹರಗೌಡ, ರೈತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಗುರುಲಿಂಗನಗೌಡ, ಜಿಲ್ಲಾ ಅಧ್ಯಕ್ಷ ಪ್ರಕಾಶ್ ಗೌಡ, ಪ್ರಧಾನ ಕಾರ್ಯದರ್ಶ ಮದಿರೆ ಕುಮಾರಸ್ವಾಮಿ, ಪಕ್ಷದ ಮುಖಂಡರುಗಳಾದ ಡಾ.ಎಸ್.ಜೆ.ವಿ.ಮಹಿಪಾಲ್, ಕೆ.ಎ.ರಾಮಲಿಂಗಪ್ಪ, ಎರ್ರಂಗಳಿ ತಿಮ್ಮಾರೆಡ್ಡಿ, ಹೆಚ್.ಹನುಮಂತಪ್ಪ, ಗಣಪಾಲ್ ಐನಾಥರೆಡ್ಡಿ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.