ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಘಟಕದಿಂದ ಮುಷ್ಕರ

ಕಾಳಗಿ:ಫೆ.28 : ರಾಜ್ಯ ಸರ್ಕಾರಿ ನೌರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವನ್ನು ಆಗ್ರಹಿಸಿ ದಿನಾಂಕ:01-03-2023ರಿಂದ ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಕರೆ ನೀಡಿರುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಾಳಗಿ ತಾಲೂಕು ಘಟಕದ ಅಧ್ಯಕ್ಷ ಶರಣಗೌಡ ಪೋಲಿಸ್ ಪಾಟೀ¯ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸಂಜೆ ನಡೆಸಿರುವ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ರಾಜ್ಯದ 2023-24ನೇ ಸಾಲಿನ ಆಯ-ವ್ಯಯದಲ್ಲಿ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಸಹಜವಾಗಿಯೇ ನೌಕರರಲ್ಲಿ ನಿರಾಸೆಯನ್ನು ಮೂಡಿದೆ. ಕಾರಣ ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಸೇರಿಕೊಂಡು ರಾಜ್ಯ ಸರ್ಕಾರಿ ನೌರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವನ್ನು ಆಗ್ರಹಿಸಿ ದಿನಾಂಕ:01-03-2023ರಿಂದ ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ನಮ್ಮ ಬೇಡಿಕೆಗಳನ್ನು ಇಡೇರಿಸುವವರೆಗೂ ಸಮಸ್ತ ಸರ್ಕಾರಿ ನೌಕರರು ಒಟ್ಟಾಗಿ ಸೇರಿಕೊಂಡು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಮ್ಮ ಸಂಘದ ರಾಜ್ಯಾಧ್ಯಕ್ಷರೂ ಸೇರಿ ನಿರ್ಮಾನಿಸಲಾಗಿದೆ ಎಂದರು.

ರಾಜ್ಯದ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು ದಿನಾಂಕ:01-07-2022ರಿಂದ ಜಾರೊಗೋಳಿಸಬೇಕಾಗಿತ್ತು.

ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ದಿನಾಂಕ: 01-07-2022ರಿಂದ ಪರಿಷ್ಕøತ ವೇತನ ಭತ್ಯೆಗಳಿಗೆ ಅರ್ಹರಾಗಿದ್ದು, 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಶಿಗ್ರವಾಗಿ ಮಧ್ಯಂತರ ವರದಿಯನ್ನು ಪಡೆದು, ಚುನಾವಣೆ ನೀತಿ ಸಂಹಿತೆಜಾರಿಗೆ ಮೊದಲು ಶೆ.40% ಫಿಟ್ ಮೆಂಟ್ ಸೌಲಭ್ಯವನ್ನು ದಿನಾಂಕ:01-07-2022ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸಬೇಕು.

ನೆರೆಯ ರಾಜ್ಯಗಳಾದ ಪಂಜಾಬ್, ರಾಜಸ್ಥಾನ್, ಛತ್ತಿಸಘಡ್, ಜಾರ್ಖಂಡ್, ಹಿಮಾಚಲ ಪ್ರದೇಶ, ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್. ಯೋಜನೆಯನ್ನು ರದ್ದು ಪಡಿಸಿ ಹಳೇ ಪಿಂಚಣಿ ಯೋಜನೆಯನ್ನೇ ಜಾರಿಗೋಳಿಸಬೇಕು ಎಂಬ ಅತ್ಯಾಧಿ ಬೇಡಿಕೆಗಳನ್ನಿಟ್ಟುಕೊಂಡು ದಿನಾಂಕ:01-03-2023ರಿಂದ ರಾಜ್ಯದ ಸಮಸ್ತ ಸರ್ಕಾರಿ ನೌಕರರಿ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಠಾವಧಿ ಮುಷ್ಕರವನ್ನು ನಡೆಸಲಾಗುತ್ತಿದ್ದು, ಸರ್ಕಾರ ಎಚ್ಚೆತ್ತುಕೊಂಡು ನಮ್ಮ ಬೇಡಿಕೆಗಳನ್ನು ಇಡೇರಿಸುವವರೆಗೂ ಮುಷ್ಕರ ಮುಂದೋರೆಸಲಾಗುವುದು ಎಂದ ಅವರು, ಈ ಮುಷ್ಕರಕ್ಕೆ ಜಿಲ್ಲಾ, ತಾಲೂಕು, ಯೋಜನಾ ಶಾಖೆಯ ಎಲ್ಲಾ ಸರ್ಕಾರಿ ನೌಕರರು ಮುಷ್ಕರದಲ್ಲಿ ಭಾಗವಹಿಸಿ ನಮ್ಮ ಹಕ್ಕಿಗಾಗಿ ಹೋರಾಡೋಣ ಎಂದು ಮನವಿ ಮಾಡಿಕೊಂಡರು. ಸುದ್ದಗೋಷ್ಠಿಯಲ್ಲಿ ವಿವಿಧ ಇಲಾಖೆಗಳ ಸರ್ಕಾರಿ ನೌಕರರ ಸಂಘದ ಪದಾಧೀಕಾರಿಗಳು ಹಾಜರಿದ್ದರು.

ಸಂಘದ ರಾಜ್ಯ ಪರಿಷತ್ ಸದಸ್ಯರಾದ ರಮೇಶ ರಾಠೋಡ, ಶಿವಕುಮಾರ ಶಾಸ್ತ್ರೀ, ಮಹಾಂತೇಶ ಪಂಚಾಳ, ಸಂತೋಷ ಕಲ್ಮೂಡ, ಅನೀಲ ಗುತ್ತೇದಾರ, ಸೌಕತ್ ಅಲಿ ನಾವದಿಗಿಕರ್, ರವೀಂದ್ರ ಹುಣಚೇಕರ್, ತಿಪ್ಪಯ್ಯ ಪತ್ತಿ, ಡಾ.ದೀಪಕ ರಾಠೋಡ, ಭೀಮರೆಡ್ಡಿ ಮಕಾಶಿ ಸೇರಿದಂತೆ ಅನೇಕರು ಇದ್ದರು.