ರಾಜ್ಯ ಸರ್ಕಾರಿ ನೌಕರ ತುಟ್ಡಿಭತ್ಯೆ ಶೇ.3.75 ಏರಿಕೆ

ಬೆಂಗಳೂರು, ಆ. 21- ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಜಾರಿಗೆ ಬರುವಂತೆ ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.

ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ ಎನ್ ಜಿಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.

ಇದರಿಂದ ಸರ್ಕಾರಕ್ಕೆ ವಾರ್ಷಿಕ 1109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ.