ರಾಜ ರಾಜೇಶ್ವರಿ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ 

ಮಲೇಬೆನ್ನೂರು.ಮಾ.೧;ಪಟ್ಟಣದಜಿಗಳಿ ರಸ್ತೆಯಲ್ಲಿರುವ ಒಡೆಯರ ಬಸವಾಪುರದ ಪಟೇಲ್ ಬಸಪ್ಪ ಎಜುಕೇಶನ್ ಅಸೋಸಿಯೇಶನ್ ನ ರಾಜ ರಾಜೇಶ್ವರಿ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯ ಆವರಣದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ವಿದ್ಯಾ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ವಿವಿಧ ವಿಜ್ಞಾನ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿದರು. ಈ ವೇಳೆ ಸಂಸ್ಥೆಯ ಕಾರ್ಯದರ್ಶಿ ಜಿ ಬಿ ಶಿವಾನಂದಪ್ಪ , ಪ್ರಾಂಶುಪಾಲ ರಾದ ಸುಜಾತ ಜಿ ಓ, ಮುಖ್ಯೋಪಾಧ್ಯಾಯ ಎಸ್ ಶಶಿಧರ್ ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು.