ರಾಣ ಅಡ್ಡದಲ್ಲಿ `ಗಲ್ಲಿ ಬಾಯ್ ‘ ಹಾಡು ಬಿಡುಗಡೆ  

ಯುವ ಶ್ರೇಯಸ್ ನಾಯಕನಾಗಿ ನಟಿಸಿರುವ ,  “ರಾಣ”  ಚಿತ್ರದ “ಗಲ್ಲಿ ಬಾಯ್” ಹಾಡನ್ನು ಜೋಗಿ ಪ್ರೇಮ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ನಂದಕಿಶೋರ್ ನಿರ್ದೇಶನದಚಿತ್ರಕ್ಕೆ ಗುಜ್ಜಲ್ ಪುರುಷೋತ್ತಮ್ ಬಂಡವಾಳ ಹಾಕಿದ್ದಾರೆ.

 ಚಂದನ್ ಶೆಟ್ಟಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಹಾಡಿದ್ದಾರೆ.ಈ ಹಾಡಿನಲ್ಲಿ ಶ್ರೇಯಸ್ ಹಾಗೂ ರೀಷ್ಮಾ ನಾಣಯ್ಯ ಹೆಜ್ಜೆ ಹಾಕಿದ್ದಾರೆ.

ನಾಯಕ ಶ್ರೇಯಸ್ ಮಾತನಾಡಿ,, ನನ್ನ ಸ್ಪೂರ್ತಿಯಾದ ವಿಷ್ಣುವರ್ಧನ್ ಹಾಗೂ ಅಪ್ಪು ಅವರನ್ನು ನೆನಪಿಸಿಕೊಳ್ಳುತ್ತೇನೆ. ಚಂದನ್ ಶೆಟ್ಟಿ  ಎಲ್ಲರ ಮನಸಿಗೆ ಹತ್ತಿರವಾಗುವ ಸಾಹಿತ್ಯ, ಸಂಗೀತ ನೀಡಿದ್ದಾರೆ.  ರೀಷ್ಮಾ ನಾಣಯ್ಯ ಒಳ್ಳೆಯ ನೃತ್ಯಗಾರ್ತಿ.  ನೃತ್ಯ ನಿರ್ದೇಶಕ ಇಮ್ರಾನ್ ಮಾಸ್ಟರ್ ಹಾಗೂ ಛಾಯಾಗ್ರಾಹಕ ಶೇಖರ್ ಚಂದ್ರ  ಕಾರ್ಯವೈಖರಿ ಚೆನ್ನಾಗಿದೆ.  ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಅಭಿನಯಿಸಿದ್ದೇನೆ. ನವೆಂಬರ್11 ರಂದು ಚಿತ್ರ ತೆರೆಗೆ ಬರಲಿದೆ.‌ ಹಾಡು ಬಿಡುಗಡೆ ಮಾಡಿಕೊಟ್ಟ ಪ್ರೇಮ್ ಅವರಿಗೆ ಹಾಗೂ ಅವಕಾಶ ನೀಡಿರುವ ನಿರ್ಮಾಪಕ ಪುರುಷೋತ್ತಮ್ ಹಾಗೂ ನಿರ್ದೇಶಕ ನಂದಕಿಶೋರ್ ಅವರಿಗೆ ಧನ್ಯವಾದ ಎಂದರು ನಾಯಕಿ ರೀಷ್ಮಾ ನಾಣಯ್ಯ ಚಿತ್ರ ಚೆನ್ನಾಗಿ ಬಂದಿದೆ. ಈ ಹಾಡಂತೂ ಸಖತಾಗಿದೆ. ಹಾಡು ಎಲ್ಲರ ಗಮನ ಸೆಳೆಯುತ್ತಿದೆ ಎಂದರು

ನಿರ್ಮಾಪಕ ಮಂಜು, ಗುಜ್ಜಲ್ ಪುರುಷೋತ್ತಮ್ ಸಿನಿಮಾ ಮಾಡುತ್ತಿದ್ದೇನೆ. ಜೊತೆಗಿರಬೇಕು ಎಂದರು.  ನನ್ನ ಮಗನೇ ಹೀರೋ ಅಂತ ತಿಳಿದ ಮೇಲೆ,  ಅವನಿಗೆ ಚಿತ್ರ ಚೆನ್ನಾಗಿ ಬರಲು ನಿರ್ದೇಶಕರು ಕಾರಣ ಅವರು ಹೇಳಿದ ಹಾಗೆ ಕೇಳಬೇಕು ಅಂತ ಹೇಳಿದೆ ಎಂದರು.

ನಿರ್ದೇಶಕ ನಂದ ಕಿಶೋರ್,  “ರಾಣ” ಒಂದೊಳ್ಳೆಯ ಕೌಟುಂಬಿಕ ಚಿತ್ರ.  ಹಳ್ಳಿಯಿಂದ ನಗರಕ್ಕೆ ಬಂದು ನೆಲೆಸಿರುವವರ ಕುರಿತಾದ ಕಥೆಯಿದೆ. ಉತ್ತಮ ಚಿತ್ರ ಮಾಡಿದ್ದೇವೆ. ಪ್ರೋತ್ಸಾಹ ನೀಡಿ ಎಂದರು.

ನಿರ್ಮಾಪಕ ಗುಜ್ಜಲ್ ಪುರುಷೋತ್ತಮ್ ಮಾತನಾಡಿ ಕೆ.ಮಂಜು  ಸಹಕಾರದಿಂದ ಚಿತ್ರ ನಿರ್ಮಾಣ ಮಾಡಿದ್ದೇನೆ. ಇಡೀ ತಂಡಕ್ಕೆ  ನನ್ನ ಧನ್ಯವಾದ ಎಂದರು.  ಕೋಟೆ ಪ್ರಭಾಕರ್, ಅಶೋಕ್ , ರಘು ಹಾಗೂ ಗಾಯಕ ಅನಿರುದ್ಧ್ ಶಾಸ್ತ್ರಿ ಚಿತ್ರದ ಕುರಿತು ಮಾಹಿತಿ ಹಂಚಿಕೊಂಡರು.