ರಾತ್ರಿ ಸುರಿದ ಮಳೆಯಿಂದ ಬಸ್ ನಿಲ್ದಾಣದ ಕಾಂಪೌಂಡ್ ಗೋಡೆ ಕುಸಿತ!

ಲಿಂಗಸೂಗೂರು.ನ.೨೧-ನಿನ್ನೆ ರಾತ್ರಿ ೮ ಗಂಟೆಗೆ ಸುರುವಾದ ಮಳೆ ೧೦ ಗಂಟೆಯಾದರು ಬಿಡದ ಬಾರಿ ಮಳೆಗೆ ಬಸ್ ನಿಲ್ದಾಣದ ಕಾಂಪೌಂಡ್ ಗೋಡೆ ಕುಸಿದು ಬಿದ್ದು ರಸ್ತೆ ಮೇಲೆ ಬಿದ್ದಿರುವುದರಿಂದ ಸಾರ್ವಜನಿಕರಿಗೆ ವಾಹನ ಸವಾರರಿಗೆ ತೊಂದರೆಯಾಗಿದೆ ಕೂಡಲೇ ಬಸ್ ನಿಲ್ದಾಣದ ಕಂಟ್ರೋಲರ್ ಡಿಪೋ ಮ್ಯಾನೇಜರ್ ಅಧಿಕಾರಿಗಳು ತೆರುವುಗೊಳಿಸಿ ಸಂಚಾರಕ್ಕೆ ಅನುವು ಮಾಡಲು ಮುಂದಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿಯುವ ಮೂಲಕ ಜನ ಜೀವನ ಅಸ್ತವ್ಯಸ್ತವಾಗಿದೆ ಬಹುತೇಕ ಗ್ರಾಮೀಣ ಗ್ರಾಮಗಳಲ್ಲಿ ರಸ್ತೆ ಬದಿಯಲ್ಲಿ ನೀರು ನಿಂತಿದೆ ಮತ್ತು
ರೈತರ ಜಮೀನುಗಳಿಗೆ ನೀರು ನುಗ್ಗಿ ಬೆಳೆ ನಷ್ಟವಾಗಿದೆ.
ಅಕಾಲಿಕ ಮಳೆಗೆ ರೈತರು ಬೆಳೆದ ಬೆಳೆಗಳು ನಾಶವಾಗಿವೆ ರೈತರು ಬೆಳೆದ ಫಸಲು ಕೈಗೆ ಬಂದ ತುತ್ತು ಬಾಯಿಗೆ ಬಂದಂತೆ ಆಗಿದೆ ಕೂಡಲೇ ಕಂದಾಯ ಇಲಾಖೆಯ ಅಧಿಕಾರಿಗಳು ಸರ್ವೇ ಮಾಡಿ ಬೆಳೆ ನಷ್ಟ ಪರಿಹಾರ ಕೊಡಬೇಕು ಅಕಾಲಿಕ ಮಳೆಗೆ ಹಾಳಾದ ರಸ್ತೆಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆದು ರಸ್ತೆ ದುರಸ್ತಿಗೆ ಮುಂದಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.