ಚಿತ್ತಾಪುರ:ಅ.22: ಕಾಂಗ್ರೆಸ್ ಪಕ್ಷದಲ್ಲಿ 40 ವರ್ಷಗಳಿಂದ ಎಲೆಮರೆಕಾಯಿಯಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ರಾಧಾಕೃಷ್ಣ (ಆರ್‍ಕೆ) ದೊಡ್ಡಮನಿ ಅವರಿಗೆ ಬರುವ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದ ಟಿಕೇಟ್ ನೀಡಬೇಕು ಎಂದು ಮಾಜಿ ಸಚಿವ ಕಾಂಗ್ರೆಸ್ ಹಿರಿಯ ಮುಖಂಡ ಬಾಬುರಾವ ಚಿಂಚನಸೂರ ಹೈಕಮಾಂಡಕ್ಕೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ರಾಧಾಕೃಷ್ಣ ಅವರಿಗೆ ಟಿಕೇಟ್ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಇವರಿಗೆ ಟಿಕೇಟ್ ನೀಡಿದ್ದರೆ ರಾಜ್ಯದಲ್ಲಿಯೇ ಅತ್ಯಂತ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸಿ ದಾಖಲೆ ನಿರ್ಮಿಸಲಿದ್ದಾರೆ ಈ ನಿಟ್ಟಿನಲ್ಲಿ ನಾನು ಹಗಲಿರಳು ಶ್ರಮವಹಿಸಿ ರಾಧಾಕೃಷ್ಣ ಅವರನ್ನು ಗೆಲ್ಲಿಸಲು ಭೀಷ್ಮಾ ಪ್ರತಿಜ್ಞೆ ಮಾಡಿದ್ದೇನೆ ಎಂದು ಚಿಂಚನಸೂರ ತಿಳಿಸಿದ್ದಾರೆ.
ರಾಧಾಕೃಷ್ಣ ಅವರ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿದ್ದಾರೆ ಅಷ್ಟೇ ಅಲ್ಲ, ಎಲ್ಲ ಜಾತಿ ಜನಾಂಗದವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎಲ್ಲರ ಜೊತೆಗೆ ಪ್ರೀತಿ ವಿಶ್ವಾಸದಿಂದ ಇದ್ದಾರೆ. ಇವರಿಗೆ ಎಲ್ಲ ರೀತಿಯ ಅರ್ಹತೆ ಮತ್ತು ಸಾಮಥ್ರ್ಯವಿದೆ ಆದ್ದರಿಂದ ಇವರಿಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಲೋಕಸಭೆ ಅಥವಾ ವಿಧಾನಸಭೆ ಅಥವಾ ಯಾವುದೇ ಚುನಾವಣೆ ಇರಲಿ ಅಲ್ಲಿ ರಾಧಾಕೃಷ್ಣ ಅವರು ಎಲೆಮರೆ ಕಾಯಿಯಂತೆ ರಾಜಕೀಯ ತಂತ್ರ ಪ್ರತಿತಂತ್ರ ಹೆಣೆಯುವ ಮೂಲಕ ಅಭ್ಯರ್ಥಿಗಳ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದಾರೆ ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಇವರ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದ್ದಾರೆ.
“ರಾಜ್ಯ ಮತ್ತು ದೇಶದಲ್ಲಿ ಕಾಂಗ್ರೆಸ್ ಪಡಿ ಉತ್ತಮ ವಾತಾವರಣವಿದೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚಿನ ಸ್ಥಾನಗಳಲ್ಲಿ ಗೆದ್ದು ಅಧಿಕಾರದ ಗದ್ದುಗೆ ಹೀಡಿಯಲಿದೆ ಹೀಗಾಗಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ರಾಧಾಕೃಷ್ಣ ಅವರಿಗೆ ಕಾಂಗ್ರೆಸ್ ಟಿಕೇಟ್ ನೀಡಿದರೆ ದಾಖಲೆ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಇದರಲ್ಲಿ ಯಾವುದೇ ಅನುಮಾನವಿಲ್ಲ, ಇವರನ್ನು ಗೆಲ್ಲಿಸುವುದೇ ನನ್ನ ಪ್ರಮುಖ ಗುರಿಯಾಗಿದೆ”.
-ಬಾಬುರಾವ ಚಿಂಚನಸೂರ ಮಾಜಿ ಸಚಿವರು.