ರಾಮನಗರ ಸಭೆ ಕೈ ಪಾಲು ಬಿಜೆಪಿ – ಜೆಡಿಎಸ್‌ಗೆ ಮುಖಭಂಗ


ರಾಮನಗರ, ಏ.೩೦- ಬಿಜೆಪಿ ನಾಯಕರ ಅಬ್ಬರದ ಪ್ರಚಾರದ ನಡುವೆಗೂ ರಾಮನಗರ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಚಂಡ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಜೆಪಿ ಮತ್ತು ಜೆಡಿಎಸ್‌ಗೆ ಭಾರೀ ಮುಖಭಂಗವಾಗಿದೆ. ಮತ್ತೊಂದೆಡೆ ಗೆಲುವಿನ ಸಂಭ್ರಮಾಚರಣೆ ಮಾಡಲು ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲ..!
ನಿನ್ನೆಯಷ್ಟೇ ಕಾಂಗ್ರೆಸ್ ಅಭ್ಯರ್ಥಿ ಲೀಲಾ ಗೋವಿಂದರಾಜು ಕೊರೋನಾಗೆ ಬಲಿಯಾಗಿದ್ದಾರೆ. ಆದರೆ ಶುಕ್ರವಾರ ಮತ ಎಣಿಕೆ ನಡೆದು ಲೀಲಾ ಗೋವಿಂದರಾಜು ಗೆಲುವು ಸಾಧಿಸಿದ್ದಾರೆ. ೯೧೭ ಮತಗಳನ್ನು ಪಡೆಯುವ ಮೂಲಕ ೮೧೦ ಮತಗಳ ಅಂತರದಿಂದ ಕೈ ಅಭ್ಯರ್ಥಿ ಲೀಲಾ ಗೋಂವಿದರಾಜು ಗೆಲುವು ಪಡೆದಿದ್ದಾರೆ.
ಇವರ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಕೇವಲ ೧೦೭ ಮತಗಳನ್ನಷ್ಟೆ ಪಡೆದು ಠೇವಣಿ ಕಳೆದುಕೊಂಡಿದ್ದಾರೆ. ಇನ್ನು ಡಿಸಿಎಂ ಅಶ್ವಥ್ ನಾರಾಯಣ್‌ಗೆ ಮುಖಭಂಗ ಆಗಿದ್ದು, ರಾಮನಗರ ನಗರಸಭೆ ಚುನಾವಣೆಯಲ್ಲಿ ಭಾರೀ ಹಿನ್ನಡೆಯಾಗಿದೆ.
ಒಟ್ಟಾರೆ, ರಾಮನಗರ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಖಾತೆಯೇ ತೆರೆದಿಲ್ಲ. ೩೧ ವಾರ್ಡ್‌ಗಳ ಪೈಕಿ ಒಂದು ವಾರ್ಡ್‌ನಲ್ಲೂ ಬಿಜೆಪಿ ಖಾತೆ ತೆರೆದಿಲ್ಲ. ೩೧ ವಾರ್ಡ್ ಗಳಲ್ಲೂ ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ಸ್ವತ: ಜಿಲ್ಲಾ ಉಸ್ತುವಾರಿಯಾಗಿರುವ ಸಚಿವ ಅಶ್ವಥ್ ನಾರಾಯಣ್ ಅಬ್ಬರದ ಪ್ರಚಾರ ನಡೆಸಿದ್ದರು. ೨೦ ವಾರ್ಡ್‌ಗಳಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ ಎಂದು ಅಶ್ವಥ್ ನಾರಾಯಣ್ ಹೇಳಿದ್ದರು. ಒಟ್ಟಾರೆ ೩೧ ವಾರ್ಡ್‌ಗಳ ಪೈಕಿ ಕಾಂಗ್ರೆಸ್-೧೯, ಜೆಡಿಎಸ್-೧೧, ಪಕ್ಷೇತರ -೦೧ ವಾರ್ಡ್‌ನಲ್ಲಿ ಗೆಲುವು ಸಾಧಿಸಿವೆ.