ರಾಮನವಮಿ ಪ್ರಯುಕ್ತ ಮದ್ಯ ಮಾರಾಟ ನಿಷೇಧ

ಕಲಬುರಗಿ,ಮಾ.29:ಮಾರ್ಚ್ 30 ರಂದು ಕಲಬುರಗಿ ನಗರ ಹಾಗೂ ಜಿಲ್ಲೆಯಾದ್ಯಂತ ರಾಮನವಮಿ ಆಚರಿಸುತ್ತಿರುವ ಪ್ರಯುಕ್ತ ಕಲಬುರಗಿ ನಗರ ಹಾಗೂ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್ಯ, ಸರಾಯಿ, ಸೇಂದಿ, ಸ್ವದೇಶಿ ಹಾಗೂ ವಿದೇಶಿ ಮದ್ಯ ಹಾಗೂ ಎಲ್ಲ ತರಹದ ಮಾದಕ ವಸ್ತುಗಳ ಮಾರಾಟ ಮಾಡುವುದನ್ನು ಇದೇ ಮಾರ್ಚ್ 30ರ ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 31ರ ಬೆಳಗಿನ 6 ಗಂಟೆಯವರೆಗೆ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.

ಈ ಸಂದರ್ಭದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅನ್ವಯ ಈ ಆದೇಶ ಹೊರಡಿಸಲಾಗಿದೆ.