ರಾಮಸಾಗರದಲ್ಲಿ ಜನ ದೂರು ಆಲಿಸಿದ ಮಾಲಪಾಟಿ


(ಸಂಜೆವಾಣಿ ವಾರ್ತೆ)
ಬಳ್ಳಾರಿ:ಜು,16- ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಇಂದು ಸಂಡೂರು ತಾಲೂಕಿನ ‌ತೋರಣಗಲ್ಲು ಹೋಬಳಿಯ ಎಂ.ರಾಮಸಾಗರ ಗ್ರಾಮದಲ್ಲಿ ವಾಸ್ತವ್ಯ ನಡೆಸಿ ಅಲ್ಲಿನ ಜನರ ದೂರು-ದುಮ್ಮಾನಗಳನ್ನು ಆಲಿಸಿದರು
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಸಹಾಯಕ ಆಯುಕ್ತ ಡಾ.ಆಕಾಶ ಶಂಕರ್, ತಹಸೀಲ್ದಾರ್ ಗುರುಬಸವರಾಜ ಸೇರಿದಂತೆ ವಿವಿಧ ಇಲಾಖೆಗಳ‌ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು