ರಾಮ ರಾಜ್ಯದ ಸರ್ಕಾರ ರಾವಣರ ವರ್ತನೆ ಖಂಡನೀಯ: ಬಸವರಾಜ್


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮೇ.29:  ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಗೌರವ ಅಧ್ಯಕ್ಷ ಯು.ಬಸವರಾಜ್ ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ. ನಾವು ರಾಮ ರಾಜ್ಯ ನಡೆಸುತ್ತೇವೆ ಎನ್ನುವವರು ರಾವಣರ ವರ್ತನೆ ನಡೆಸುತ್ತಿರುವುದನ್ನು ಖಂಡಿಸುವುದಾಗಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ತಮ್ಮದು ರಾಮನ ನೀತಿ ಆಧಾರಿತ ಸರ್ಕಾರ ಎನ್ನುತ್ತ ಪ್ರತಿಭಟನೆ ನಡೆಸುವವರ ಮೇಲೆ ಲಾಠಿ ಚಾರ್ಜ್ ಮಾಡಿ, ಬಂಧಿಸಿದೆ ಇದು ರಾವಣನ ವರ್ತನೆಯಾಗಿದ್ದು ಇದು ಖಂಡನೀಯ ಎಂದರು.
ಈ ಹಿಂದಿನ ಬಿಜೆಪಿ ಸರ್ಕಾರ ದೇವದಾಸಿ ಮಹಿಳೆಯರಿಗೆ ಇದ್ದ ಅನೇಕ ಸೌಲಭ್ಯಗಳನ್ನು ಕಡಿತಗೊಳಿಸಿತ್ತು. ಅದಕ್ಕಾಗಿ ಅಂತಹ ಸರ್ಕಾರವನ್ನು ತೊಲಗಿಸಿದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ.
ದೇವದಾಸಿ ಮಹಿಳೆಯರ ಮಾಸಿಕ ಸಹಾಯಧನವನ್ನು 3,000 ರೂಗಳಿಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದಲ್ಲದೆ ದೇವದಾಸಿಯರ ಪುನರ್ ಸರ್ವೇ ಆಗಬೇಕು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಜನ ಸಂಖ್ಯೆಗನುಗುಣವಾಗಿ ಅನುದಾನ ಸುಮಾರು 30,000 ಕೋಟಿ ರೂಗಳಷ್ಠು ಅನುದಾನ ಬಿಡುಗಡೆಯಾಗುತ್ತಿದ್ದರೂ ನಮ್ಮ ಗಳ ಅನುದಾನವನ್ನು ಯಾಕೆ ಹಿಚ್ಚಿಸುತ್ತಿಲ್ಲವೆಂಬುದು ಯಕ್ಷ ಪ್ರಶ್ನೆಯಾಗಿದೆ.
ಈಗಲಾದರೂ ಮಾಸಿಕ ಸಹಾಯಧನವನ್ನು ಬೆಲೆ ಏರಿಕೆಯಂತೆ ಕನಿಷ್ಟ 5,000 ರೂಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಬೇಕೆಂದು ಮರಳಿ ಒತ್ತಾಯಿಸುವುದಾಗಿ ಹೇಳಿದರು.
ಎಲ್ಲಾ ದೇವದಾಸಿ ಮಹಿಳೆಯರಿಗೆ ನೀಡಲಾಗುವ ಮಾಸಿಕ ಸಹಾಯಧನವನ್ನು 5,000 ರೂಗಳಿಗೆ ಹೆಚ್ಚಿಸಬೇಕು. ದೇವದಾಸಿ ಮಹಿಳೆಯರ ಪರಿತ್ಯಕ್ತ ಹೆಣ್ಣು ಮಕ್ಕಳಿಗೂ ಅದನ್ನು ವಿಸ್ತರಿಸಬೇಕು.
2) ಗಣತಿಯಲ್ಲಿ ಬಿಟ್ಟು ಹೋದ ದೇವದಾಸಿ ಮಹಿಳೆಯರನ್ನು ಗಣತಿ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಎಲ್ಲಾ ರೀತಿಯ ನೆರವನ್ನು ಒದಗಿಸಬೇಕು. ದೇವದಾಸಿ ಮಹಿಳೆಯರ ಮಕ್ಕಳ ಮತ್ತು ಕುಟುಂಬದ ಸದಸ್ಯರನ್ನು ತಕ್ಷಣವೇ ಗಣತಿ ಮಾಡಿ ಅವರಿಗೂ ಪುನರ್ವಸತಿ ಕಲ್ಪಿಸಬೇಕು.ಎಲ್ಲಾ ದೇವದಾಸಿ ಮಹಿಳೆಯರ ಮಕ್ಕಳು ಅಂತರ್ಜಾತಿಯಲ್ಲಾಗಲೀ ಮತ್ತು ಸಜಾತಿಯಲ್ಲಾಗಲೀ ಹಾಗೂ ದೇವದಾಸಿ ಮಹಿಳೆಯರ ಕುಟುಂಬಗಳ ಸದಸ್ಯರ ನಡುವೆಯಾಗಲೀ ಮದುವೆಯಾದಲ್ಲಿ ಪ್ರೋತ್ಸಾಹ ಧನವನ್ನು 05 ಲಕ್ಷ ರೂ ನೀಡಬೇಕು. ಇವರ ಮದುವೆಯ ವಿಚಾರದಲ್ಲಿ ಷರತ್ತುಗಳಿರಬಾರದು. ಕೇಂದ್ರ ಸರಕಾರ ಈ ಕೂಡಲೇ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಜನ ಸಂಖ್ಯೆಗನುಗುಣವಾಗಿ ಅನುದಾನ ಬಿಡುಗಡೆ ಮಾಡಬೇಕು. ಅದೇ ರೀತಿ, ಎಸ್ ಸಿ ಎಸ್ಪಿ – ಟಿಎಸ್ಪಿ ಕಾಯ್ದೆಯನ್ನು ಜಾರಿಗೊಳಿಸಬೇಕು
ವಿದ್ಯಾವಂತ ನಿರುದ್ಯೋಗಿಗಳಿಗೆ ಅವರು ಉದ್ಯೋಗ ಪಡೆಯುವವರೆಗೆ ತಲಾ 10,000 ರೂಗಳ ನಿರುದ್ಯೋಗ ಭತ್ಯೆ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಉಲ್ಲೇಖಿಸಿದರು.
ಈ ಬೇಡಿಕೆಗಳನ್ನು ಬರಯವ ಒಂದು ತಿಂಗಳಲ್ಲಿ ಈಡೇರಿಸಲು ಸರ್ಕಾರ ಸ್ಪಂದಿಸದಿದ್ದರೆ ಹೋರಾಟ ನಡೆಸುವುದಾಗಿ ಹೇಳಿದರು.
ಸುದ್ದಿಗೋಷ್ಟಿಯಲ್ಲಿ   ರಾಜ್ಯ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ  ಬಿ.ಮಾಳಮ್ಮ, ಅಧ್ಯಕ್ಷೆ ಹುಲಿಗೆಮ್ಮ, ಉಪಾಧ್ಯಕ್ಷ ಜಿ.ನಾಗರಾಜ್, ಜಿಲ್ಲಾ ಕಾರ್ಯದರ್ಶಿ ಎ.ಸ್ವಾಮಿ. ಇದ್ದರು.