ರಾಯಚೂರಿಗೆ ಏಮ್ಸ್ ಮಂಜೂರು ಮಾಡಿ

ದೇವದುರ್ಗ,ಮಾ.೦೯- ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ಮಾಡುವಂತೆ ಒತ್ತಾಯಿಸಿ ಹಾಗೂ ರಾಯಚೂರಿನಲ್ಲಿ ಏಮ್ಸ್ ಹೋರಾಟ ಸಮಿತಿ ಧರಣಿ ೩೦೦ದಿನ ಪೂರೈಸಿದ ಹಿನ್ನೆಲೆಯಲ್ಲಿ ಬೆಂಬಲಿಸಿ ವಿಶ್ವಕರ್ತ ಸಮುದಾಯದ ಮುಖಂಡರು ಮಿನಿವಿಧಾನಸೌಧ ಮುಂದೆ ಪ್ರತಿಭಟನೆ ನಡೆಸಿ ಸಿಎಂ ಬಸವರಾಜ ಬೊಮ್ಮಾಯಿಗೆ ಬರೆದ ಮನವಿ ಪತ್ರವನ್ನು ಬುಧವಾರ ತಹಸೀಲ್ದಾರ್‌ಗೆ ಸಲ್ಲಿಸಿದರು.
ರಾಯಚೂರು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಅತ್ಯಂತ ಹಿಂದುಳಿದೆ. ಜಿಲ್ಲೆಯಲ್ಲಿ ಅಪಾರ ನೈಸರ್ಗಿಕ ಸಂಪತ್ತು ಹೊಂದಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಕಂಡಿಲ್ಲ. ಕೃಷ್ಣಾ ಹಾಗೂ ತುಂಗಭದ್ರಾ ನದಿ ಸಮೃದ್ಧವಾಗಿ ಹರಿಯುತ್ತಿದ್ದರೂ ನಿರೀಕ್ಷಿತ ಮಟ್ಟದಲ್ಲಿ ರೈತರಿಗೆ ನೀರುಸಿಗುತ್ತಿಲ್ಲ. ಇದರಿಂದ ಕೃಷಿಯಿಂದ ಉದ್ಯೋಗ ಅವಕಾಶಗಳು ಕಡಿಮೆಯಾಗಿದ್ದು, ಯುವಕರು, ರೈತರು, ಕೂಲಿಕಾರರು ಗುಳೆ ಹೋಗುತ್ತಿದ್ದಾರೆ ಎಂದು ದೂರಿದರು.
ಏಮ್ಸ್ ಮಂಜೂರು ಮಾಡಿದರೆ ಸ್ಥಳೀಯರಿಗೆ ಉದ್ಯೋಗ ದೊರೆಯುವ ಜತೆಗೆ ಆರೋಗ್ಯ ಸೇವೆ, ಶಿಕ್ಷಣ ವ್ಯವಸ್ಥೆ ಸುಧಾರಣೆಯಾಗಲಿದೆ. ಈ ಹಿಂದೆ ಐಐಟಿಯಲ್ಲಿ ಆದ ಅನ್ಯಾಯ ಸರಿಪಡಿಸಲು ಸರ್ಕಾರ ಏಮ್ಸ್ ಮಂಜೂರು ಮಾಡಬೇಕು. ಸಚಿವ ಸಂಪುಟದಲ್ಲಿ ಅನುಮೋಧನೆ ಪಡೆದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿದರು.
ಅಧ್ಯಕ್ಷ ರಮೇಶ್ ಪತ್ತಾರ್, ಮಲ್ಲಪ್ಪ ವಿಶ್ವಕರ್ಮ, ಕಾಳಪ್ಪ ಪತ್ತಾರ್, ಗಂಗಾಧರ್ ಪತ್ತಾರ್, ದೇವೇಂದ್ರಪ್ಪ, ಗುರುರಾಜ್, ಪ್ರಾಣೇಶ್, ಶಿವಕುಮಾರ್, ಚಿತ್ರಶೇಖರ್, ಕಸಾಪ ಮಾಜಿ ಅಧ್ಯಕ್ಷ ಎಚ್.ಶಿವರಾಜ್, ರಂಗಪ್ಪ ಕೋತಿಗುಡ್ಡ, ಮಲ್ಲಪ್ಪ ಅಜ್ಜನಿಗೆ, ರಮೇಶ್ ಇತರರಿದ್ದರು.