ರಾಯ್ ಬರೇಲಿ: ರಾಹುಲ್ ನಾಮಪತ್ರ ಸಲ್ಲಿಕೆ

ನವದೆಹಲಿ,ಮೇ,೩- ಉತ್ತರ ಪ್ರದೇಶದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಿಂದ ಅದೃಷ್ಠ ಅರಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ, ತಾಯಿ ಪ್ರತಿನಿಧಿಸುತ್ತಿದ್ದ ಕ್ಷೇತ್ರದಿಂದ ನಾಮಾಪತ್ರ ಸಲ್ಲಿಸಿದ್ದು ಚುನಾವಣಾ ಕಣ ರಂಗೇರಿದೆ.
ಸತತ ಐದು ಭಾರಿ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ವಯಸ್ಸು ಮತ್ತು ಅನಾರೋಗ್ಯದಿಂದ ಈ ಬಾರಿ ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದು ರಾಜಸ್ತಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.ಸೋನಿಯಾಗಾಂಧಿ ಅವರಿಂದ ತೆರವಾಗಿರುವ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎನ್ನುವ ಹುಡುಕಾಟದಲ್ಲಿ ಕೊನೆಗೂ ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ಅವರ ಹೆಸರು ಪ್ರಕಟಿಸಿತ್ತು. ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ರಾಹುಲ್ ಗಾಂಧಿ ರಾಯ್ ಬರೇಲಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರುಈ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವತಾಯಿ ಸೋನಿಯಾಗಾಂಧಿ, ಸಹೋದರಿ ಪ್ರಿಯಾಂಕ ಗಾಂಧಿ, ಕಾಂಗ್ರೆಸ್ ನಾಯಕರಾದ ಕೆ,ಸಿ ವೇಣುಗೋಪಾಲ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ರಾಜಸ್ತಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರುಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸಾವಿರಾರು ಕಾರ್ಯಕರ್ತರು ನಾಮಪತ್ರ ಸಲ್ಲಿಸುವ ವೇಳೆ ಜಮಾಯಿಸಿ ರಾಹುಲ್ ಗಾಂಧಿ ಅವರಿಗೆ ಬೆಂಬಲ ಸೂಚಿಸಿದರು.ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್ ಬರೇಲಿ ಲೋಕಸಬಾ ಕ್ಷೇತ್ರಗಳಿಗೆ ಕೊನೆಗೂ ಅಭ್ಯರ್ಥಿಗಳನ್ನು ಕಾಂಗ್ರೆಸ್ ಆಖೈರು ಮಾಡಿದೆ. ಈ ಬಾರಿ ಅಮೇಥಿ ಲೋಕಸಭಾ ಕ್ಷೇತ್ರದ ಬದಲು ರಾಯ್ ಬರೇಲಿ ಕ್ಷೇತ್ರದಿಂದ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸಿದೆಈ ಮೂಲಕ ಕಳೆದೊಂದು ವಾರದಿಂದ ಈ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಯಾರಾಗಲಿದ್ದಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಕಾಂಗ್ರೆಸ್ ಚುನಾವಣಾ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸರಿ ಸುಮಾರು ಮಧ್ಯರಾತ್ರಿಯ ನಂತರ ಈ ನಿರ್ಧಾರ ಪ್ರಕಟಿಸಿದೆ.ರಾಯ್ಬರೇಲಿ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ, ಇತ್ತೀಚೆಗೆ ಅವರ ತಾಯಿ ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಕ್ಷೇತ್ರ ತೆರೆವಾಗಿತ್ತು. ಈ ಎರಡೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದು ಅವುಗಳನ್ನು ಮರಳಿ ಪಡೆಯಲು ಕಾಂಗ್ರೆಸ್ ಹೈಕಮಾಂಡ್ ಶತಪ್ರಯತ್ನ ನಡೆಸಿದೆಲೋಕಸಭೆ ೫೪೫ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ೩೩೦ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದು ಉಳಿಕೆ ಕ್ಷೇತ್ರಗಳನ್ನು ಇಂಡಿಯಾ ಮೈತ್ರಿಕೂಟದ ಮಿತ್ರ ಪಕ್ಷಗಳಿಗೆ ಬಿಟ್ಟುಕೊಟ್ಟಿದ್ದು ಶತಾಯಗತಾಯ ಅಧಿಕಾರಕ್ಕೆ ತರುವ ವಿಶ್ವಾಸದಲ್ಲಿದೆ.ದೇಶದಲ್ಲಿ ಎರಡನೇ ಹಂತಕ್ಕೆ ಮತದಾನವಾಗಿ ಇನ್ನೂ ೫ ಹಂತಗಳ ೩೫೩ ಕ್ಷೇತ್ರಗಳಿಗೆ ಮತದಾನ ಬಾಕಿ ಇದೆ.

ಅಮೇಥಿಯಲ್ಲಿ ನಾಮಪತ್ರ ಸಲ್ಲಿಕೆ
ಅಮೇಥಿ ಲೋಕಸಭಾ ಕ್ಷೇತ್ರದಿಂದ ದೀರ್ಘಕಾಲದ ಕಾಂಗ್ರೆಸ್ ನಿಷ್ಠಾವಂತ ಕೆ.ಎಲ್ ಶರ್ಮಾ ಅವರನ್ನು ಕಣಕ್ಕಿಳಿಸಲಾಗಿದೆ. ಇಬ್ಬರೂ ಇಂದು ನಾಮಪತ್ರ ಸಲ್ಲಿಸಿದರು.ಈ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ರಾಜಸ್ತಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು ಉಪಸ್ಥಿತರಿದ್ದರು.ಅಮೇಥಿ ಲೋಕಸಭಾ ಕ್ಷೇತ್ರವನ್ನು ಮರಳಿ ಗೆಲ್ಲಲು ಎಲ್ಲಾ ಪ್ರಯತ್ನ ಮಾಡಿದ್ದು ರಾಹುಲ್ ಗಾಂಧಿ ಬದಲಿಗೆ ಕೆಎಲ್ ಶರ್ಮಾ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಇಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ದ ಸ್ಪರ್ಧೆ ನಡೆಯಲಿದೆ.ರಾಯ್ ಬರೇಲಿ ಕ್ಷೇತ್ರದಿಂದ ಪ್ರಿಯಾಂಕ ಗಾಂಧಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿತ್ತು. ಅವರ ಒಪ್ಪದೇ ಇದ್ದಾಗ ರಾಯ್ ಬರೇಲಿಗೆ ರಾಹುಲ್ ಗಾಂಧಿ ಮತ್ತು ಅಮೇಥಿ ಲೋಕಸಭಾ ಕ್ಷೇತ್ರಕ್ಕೆ ಕೆ.ಎಲ್ ಶರ್ಮಾ ಹೆಸರು ಪ್ರಕಟಿಸಲಾಗಿದೆ