ರಾವಿಹಾಳದಲ್ಲಿ ಪಶುವೈದ್ಯಕೀಯ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ

ಬಳ್ಳಾರಿ,ಜ.09: ಸಿರಗುಪ್ಪ ತಾಲೂಕಿನ ರಾವಿಹಾಳ್ ಗ್ರಾಮದಲ್ಲಿ ಪಶುವೈದ್ಯಕೀಯ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಎಂ.ಎಸ್.ಸೋಮಲಿಂಗಪ್ಪ ಅವರು ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಯನ್ನು ಕಟ್ಟಡ ಕಟ್ಟಲು ಭೂಮಿಯನ್ನು ದಾನ ಮಾಡಿದ ಗ್ರಾಮದ ಎ.ಈರಣ್ಣ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕಿನ ಹಿರಿಯ ಮುಖಂಡರು ಹಾಗೂ ಗ್ರಾಮದ ಹಿರಿಯ ಮುಖಂಡರು ಮತ್ತು ಗ್ರಾಮ ಪಂಚಾಯಿತಿ ನೂತನ ಸದಸ್ಯ ಆರ್.ಟಿ.ಮಾದಣ್ಣ ಹಾಗೂ ಗ್ರಾಮಸ್ಥರು ಹಾಜರಿದ್ದರು.