ರಾಷ್ಟೀಯಲೋಕ ಅದಾಲತ್:192 ಪ್ರಕರಣ ವಿಲೇವಾರಿ

ಕಲಬುರಗಿ,ಡಿ.10: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಶನಿವಾರ ರಾಷ್ಟ್ರೀಯ ಲೋಕ ಅದಾಲತನ್ನು ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿ ವತಿಯಿಂದ ಆಯೋಜಿಸಲಾಯಿತು.
ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಮೋಟಾರು ವಾಹನ ವಿಮೆ ಮತ್ತು ಸಿವಿಲ್ ಪ್ರಕರಣಗಳನ್ನು ಕರ್ನಾಟಕ ಉಚ್ಚ ನ್ಯಾಯಾಲಯ ಕಲಬುರಗಿ ಪೀಠದಲ್ಲಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು. ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದನ್ಯಾಯಮೂರ್ತಿ ಎಮ್.ಜಿ.ಎಸ್.ಕಮಲ್ ಹಾಗೂ ನ್ಯಾಯಮೂರ್ತಿ ಸಿ.ಎಮ್.ಜೋಶಿ ಅವರು ಭಾಗವಹಿಸಿದ್ದರು. ಒಟ್ಟು 192 ಪ್ರಕರಣಗಳನ್ನು ವಿಲೇವಾರಿ ಮಾಡಲಾಯಿತು. ಒಟ್ಟಾರೆ ರೂ.6,34,36,198 ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಯಿತು ಎಂದು
ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿಕಾರ್ಯದರ್ಶಿ ದಯಾನಂದ ವೀ.ಹಿರೇಮಠ ಅವರು ತಿಳಿಸಿದ್ದಾರೆ.