ರಾಷ್ಟ್ರಕವಿ ಕುವೆಂಪು ಜಯಂತಿ: ಸರಳ ಆಚರಣೆ

ಚಿತ್ರದುರ್ಗ, ಡಿ.29; ಯುಗದ ಕವಿ, ಜಗದ ಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 116ನೇ ಜಯಂತಿಯನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
 ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ ವತಿಯಿಂದ ರಾಷ್ಟ್ರಕವಿ ಕುವೆಂಪು ಜಯಂತಿ ಕಾರ್ಯಕ್ರಮವನ್ನು ಕೋವಿಡ್-19 ಹಿನ್ನಲೆಯಲ್ಲಿ ಸರಳವಾಗಿ ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ ಅವರು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಗಾವಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ನಿಜಲಿಂಗಪ್ಪ, ಡಿವೈಎಸ್‍ಪಿ ಪಾಂಡುರಂಗ, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.