ರಾಷ್ಟ್ರದ ಐಕ್ಯತೆ ಕಾಪಾಡಿ:ಸಂತೋಷ ಬಂಡೆ

ಇಂಡಿ:ನ.26: ಪ್ರಸ್ತಾವನೆಯಲ್ಲಿ ಹೇಳಿರುವ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವ ಭಾವಗಳು ನಿಜವಾದ
ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅವಿಭಾಜ್ಯ ಗುಣಲಕ್ಷಣಗಳಾಗಿದ್ದು, ಇದರ ಅಂತಿಮ ಉದ್ದೇಶ ವ್ಯಕ್ತಿಗೆ ಘನತೆಯಿಂದ ಬಾಳುವ ಅವಕಾಶವನ್ನು ಕಲ್ಪಿಸುವುದು ಹಾಗೂ ರಾಷ್ಟ್ರದ ಐಕ್ಯತೆಯನ್ನು ಕಾಪಾಡುವದಾಗಿದೆ ಎಂದು ಇಂಗ್ಲೀಷ ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಅವರು ಇಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಸಂವಿಧಾನ ದಿನದ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಪ್ರತಿಯೊಬ್ಬರಲ್ಲಿಯೂ ಕಾನೂನಿನ ಪ್ರಜ್ಞೆ ಇರಬೇಕು. ಕಾನೂನು ಇಲ್ಲದ ಸಮಾಜ ಊಹಿಸಿಕೆuಟಿಜeಜಿiಟಿeಜಳ್ಳುವುದು ಅಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಸಂವಿಧಾನದ ಪ್ರಸ್ತಾವನೆಯನ್ನು ತಿಳಿದುಕೆuಟಿಜeಜಿiಟಿeಜಳ್ಳಬೇಕು. ರಾಷ್ಟ್ರದ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ದೇಶದ ಸಂವಿಧಾನ ರಕ್ಷಣೆ ಮಾಡಿ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು ಎಂದರು.
ಟಿಜಿಟಿ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ,
ಸಂವಿಧಾನದಲ್ಲಿ ಕೊಡಲಾಗಿರುವ ಮೂಲಭೂತ ಹಕ್ಕುಗಳು ರಾಷ್ಟ್ರದ ಧ್ಯೇಯೋದ್ದೇಶಗಳನ್ನು ಸಾಧಿಸುವುದಕ್ಕೆ ಸಹಕಾರಿ. ಎಲ್ಲಿ ವ್ಯಕ್ತಿ ನಿರ್ಭಯನಾಗಿ, ಮುಕ್ತವಾಗಿ ತನ್ನ ವ್ಯಕ್ತಿತ್ವವನ್ನು ವಿಕಸನಗೊಳಿಸಿಕೊಳ್ಳಲು ಸಾಧ್ಯವಾಗುವಂಥ ವಾತಾವರಣವಿರುತ್ತದೆಯೋ ಅಲ್ಲಿ ಮಾತ್ರ ಸಂಪೂರ್ಣ ವ್ಯಕ್ತಿತ್ವ ಅರಳಲು ಸಾಧ್ಯ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಎ ಎಂ ಬೆದ್ರೇಕರ,ಇಡೀ ಜಗತ್ತಿನಲ್ಲಿಯೇ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ರಾಷ್ಟ್ರದಲ್ಲಿ, ಸಂವಿಧಾನವು ಪವಿತ್ರ ಮಹಾಗ್ರಂಥವಾಗಿದ್ದು, ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರೂ ತಿಳಿದುಕೆuಟಿಜeಜಿiಟಿeಜಳ್ಳುವಂತಾಗಬೇಕು ಎಂದರು.
ಮಕ್ಕಳಿಗೆ ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಎಸ್ ಎಚ್ ಮೈದರಗಿ,ಎನ್ ಬಿ ಚೌಧರಿ, ಎಸ್ ಬಿ ಹೆಬ್ಬಾಳ, ಎಸ್ ಪಿ ಪೂಜಾರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.