ರಾಷ್ಟ್ರಪತಿಗೆ ಯಶಸ್ವಿ ಬೈಪಾಸ್ ಸರ್ಜರಿ

ನವದೆಹಲಿ, ಮಾ.30- ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಯಶಸ್ವಿಯಾಗಿ ಬೈಪಾಸ್ ಸರ್ಜರಿ ಮಾಡಲಾಗಿದೆ.

ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ,ಅಸ್ಪತ್ರೆಯಲ್ಲಿ ಶಸ್ತ್ತ ಚಿಕಿತ್ಸೆ ನಡೆಸಲಾಗಿದೆ ಎಂದು ರಕ್ಷಣಾ ಸಚಿಚ ರಾಜನಾಥ್ ಸಿಂಗ್‌ ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆ ಬಳಿಕ ಏಮ್ಸ್ ವೈದ್ಯರ ವಿಶೇಷ ತಂಡ ರಾಷ್ಟ್ರಪತಿ ಅವರ ಆರೋಗ್ಯದ ಮೇಲೆ‌ ತೀವ್ರಾ ನಿಗಾ ಇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಾರ್ಚ್ 27 ರಂದು ದೈನಂದಿನ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ .ಈ ಸಂದರ್ಬದಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡ ಬಳಿಕ ಇನ್ನಷ್ಟು ತಪಾಸಣೆ ನಡೆಸಿದ ಸಮಯದಲ್ಲಿ ವೈದ್ಯರು ಶಸ್ತ್ರಚಿಕಿತ್ಸೆ ಸೂಚಿಸಿದ್ದರು.

ವೈದ್ಯರ ಸಲಹೆ ಮೇರೆಗೆ ದೆಹಲಿ ಸೇನಾ ರೆಫರಲ್ ಆಸ್ಪತ್ರೆ ಯಿಂದ ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಇಂದು ಯಶಸ್ವಿ ಬೈಪಾಸ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

75 ವರ್ಷದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಆರೋಗ್ಯದ ಮೇಲೆ ತಜ್ಞ ವೈದ್ಯರ ತಂಡ ತೀವ್ರ ನಿಗಾವಹಿಸಿದ್ದಾರೆ