ರಾಷ್ಟ್ರಪತ್ನಿ ವಿವಾದ: ಕ್ಷಮೆ ಕೋರಿದ ಅಧೀರ್ ರಂಜನ್ ಚೌಧರಿ

ನವದೆಹಲಿ, ಜು.28- ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ರಾಷ್ಟ್ರಪತ್ನಿ’ ಎಂದು ಕರೆದಿದ್ದ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿದ್ದಾರೆ.

ರಾಷ್ಟ್ರಪತ್ನಿ ಎಂದು ಕರೆದ ಹಿನ್ನೆಲೆಯಲ್ಲಿ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಕೇಂದ್ರ ಸಚಿವರು ಮತ್ತು ಸಂಸದರಿಂದ ಆಗ್ರಹ ಕೇಳಿ ಬಂದ ಹಿನ್ನೆಲೆಯಲ್ಲಿ ತಮ್ಮ ಹೇಳಿಕೆಗೆ ಅಧೀರ್ ರಂಜನ್ ಚೌಧರಿ ಕ್ಷಮೆ ಕೋರಿದ್ದಾರೆ.

ತಪ್ಪು ಒಪ್ಪಿಕೊಂಡಿದ್ದೇನೆ;

ರಾಷ್ಟ್ರಪತಿ ಅವರನ್ನು ರಾಷ್ಟ್ರಪತ್ನಿ” ಎಂದು ಕರೆದ ತಪ್ಪನ್ನು ನಾನು ಒಪ್ಪಿಕೊಂಡಿದ್ದು ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿ ಮಾಡಿ ವಿವರ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ.

.ಚುನಾವಣೆಯ ಸಮಯದಲ್ಲಿ ಸೋನಿಯಾ ಗಾಂಧಿ ಬಗ್ಗೆ, ಹಿರಿಯ ನಾಯಕ ಶಶಿ ತರೂರ್ ಪತ್ನಿ ಬಗ್ಗೆ ಹಾಗು ರೇಣುಕಾ ಚೌಧರಿ ಬಗ್ಗೆ ಏನೆಲ್ಲಾ ಬಿಜೆಪಿ ನಾಯಕರು ಮಾತನಾಡಿದ್ದಾರೆ ಎನ್ನುವುದು ನಮ್ಮ ಬಳಿ ಮಾಹಿತಿ ಇದೆ ಎಂದು ಅವರು ಹೇಳಿದ್ದಾರೆ‌

ಉದ್ದೇಶ ಪೂರ್ವಕ ಹೇಳಿಕೆ;

ರಾಷ್ಟ್ರಪತಿ ಅವರನ್ನು ಎರಡು ಬಾರಿ ಉದ್ದೇಶಪೂರ್ವಕವಾಗಿಯೇ ರಾಷ್ಟ್ರಪತ್ನಿ ಎಂದು ಕರೆದಿದ್ದಾರೆ ಇದನ್ನು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ,ಪಿಯುಶ್ ಗೋಯಲ್, ಕಿರಣ್ ರಿಜಿಜ್ ಸೇರಿದಂತೆ ಹಲವು ಸಚಿವರು ಮತ್ತು ಬಿಜೆಪಿ ಸಂಸದರು ಕ್ಷಮೆ ಕೋರುವಂತೆ ಪಟ್ಟು ಹಿಡಿದಿದ್ದರು.

“ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಬೇಕೂ ಎಂದು ಒತ್ತಾಯಿಸಿದ್ದರು.