ರಾಷ್ಟ್ರಿಯ ಯುವ ದಿನಾಚರಣೆ

ಚಿತ್ರದುರ್ಗ.ಜ.133:
ಸ್ವಾಮಿ ವಿವೇಕಾನಂದರ ತತ್ವಜ್ಞಾನ ಮತ್ತು ಅವರ ಆದರ್ಶಗಳು ಯುವಜನತೆಯ ದೊಡ್ಡ ಸಂಪನ್ಮೂಲ ಹಾಗೂ ಸ್ಪೂರ್ತಿ ಮೂಲವಾಗಿದೆ ಎಂದು ಶಾರದಾ ರಾಮಕೃಷ್ಣ ಆಶ್ರಮದ ಬ್ರಹ್ಮನಿಷ್ಠಾನಂದ ಸ್ವಾಮೀಜಿ ಹೇಳಿದರು.ಚಿತ್ರದುರ್ಗ ನಗರದ ಎಸ್ ಜೆ ಎಂ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ನೆಹರು ಯುವ ಕೇಂದ್ರ, ಎಸ್‍ಜೆಎಂ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರೋಟರಿ ಕ್ಲಬ್ ಚಿನ್ಮೂಲಾದ್ರಿ ಮತ್ತು ಪ್ರಜಾ ಸೇವಾ ಕ್ರೀಡಾ ಮತ್ತು ಸಾಂಸ್ಕøತಿಕ ಸಂಘ ಇವರುಗಳ ಸಂಯುಕ್ತಾಶ್ರಯರದಲ್ಲಿ ಆಯೋಜಿಸಲಾಗಿದ್ದ ಸ್ವಾಮಿ ವಿವೇಕಾನಂದರ 160ನೇ ಜನ್ಮದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆಯ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುμÁ್ಪರ್ಚನೆ ಸಲ್ಲಿಸಿ ಅವರು ಮಾತನಾಡಿದರು.ಯುವಕರು ಈ ದೇಶದ ಶಕ್ತಿಯಾಗಿದೆ. ಯುವಕರು ಹೇಡಿಗಳಾಗಬಾರದು, ಯುವಕರಿಂದ ನವ ಭಾರತ ನಿರ್ಮಾಣವಾಗಬೇಕು. ಸ್ವಾಮಿ ವಿವೇಕಾನಂದರ ತತ್ವಜ್ಞಾನ ಮತ್ತು ಆದರ್ಶಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಮುನ್ನಡೆಯಬೇಕು ಎಂದು ಹೇಳಿದರು.ಎಸ್‍ಜೆಎಂ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾ ವಿದ್ಯಾಲಯ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ.ರಮೇಶ್ ಮಾತನಾಡಿ, ಸ್ವಾಮಿ ವಿವೇಕಾನಂದರವರ ಜೀವನ ಚರಿತ್ರೆ ನಮಗೆಲ್ಲರಿಗೂ ಮಾದರಿಯಾಗಿದೆ. ವಿದ್ಯಾರ್ಥಿಗಳು ಅವರ ಪುಸ್ತಕಗಳನ್ನು ಓದಿ ಆತ್ಮಸ್ಥೈರ್ಯ ಪಡೆದುಕೊಂಡು ಅರ್ಥಪೂರ್ಣ ವಿದ್ಯಾರ್ಥಿ ಜೀವನ ನಡೆಸಿ ಸಾಧನೆಯ ಗುರಿ ಸಾಧಿಸಬೇಕು ಎಂದು ನುಡಿದರುlಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಬೇರೆ ಬೇರೆ ಕ್ಷೇತ್ರಗಳಲ್ಲಿ ಸೇವೆ ಸಾಧನೆ ಸಲ್ಲಿಸಿದ ಯುವಕರಿಗೆ ಸನ್ಮಾನ ಮಾಡಲಾಯಿತು.ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಮಜಹರ್ ಉಲ್ಲಾ, ರೋಟರಿ ಕ್ಲಬ್ ಚಿನ್ಮೂಲಾದ್ರಿ ಅಧ್ಯಕ್ಷ ಅರುಣ್ ಕುಮಾರ್, ಯುವ ರೆಡ್ ಕ್ರಾಸ್ ಸಂಯೋಜಕರಾದ ಡಾ. ನಾಜಿರಾಉನ್ನಿಸ, ರಾಷ್ಟ್ರೀಯ ಸೇವಾ ಯೋಜನೆಯ ರೇವಣ್ಣ ಮತ್ತಿತರರು ಉಪಸ್ಥಿತರಿದ್ದರು.