ರಾಷ್ಟ್ರೀಯ ಪತ್ರಿಕಾ ದಿನಾಚರಣೆ : ಕ್ರೀಡಾಕೂಟಕ್ಕೆ ಚಾಲನೆ

ರಾಯಚೂರು.ನ.೧೯- ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರಾಯಚೂರು ರಿಪೋರ್ಟ್‌ರ್ಸ್ ಗಿಲ್ಡ್ ಪತ್ರಕರ್ತರಿಗಾಗಿ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಿತು.
ಎರಡು ದಿನಗಳ ಕ್ರೀಡಾಕೂಟಕ್ಕೆ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ ಸತೀಶ್ ಹಾಗೂ ಸುದ್ದಿಮೂಲ ದಿನಪತ್ರಿಕೆ ಸಂಪಾದಕ ಬಸವರಾಜ್ ಸ್ವಾಮಿ ಜಂಟಿಯಾಗಿ ಬ್ಯಾಡ್ಮಿಂಟನ್ ಆಡುವ ಮೂಲಕ ಚಾಲನೆ ನೀಡಿದರು. ನಂತರ ಬಸವರಾಜ್ ಸ್ವಾಮಿ ಅವರು ಮಾತನಾಡುತ್ತಾ, ಕ್ರೀಡೆಗಳು ಕೇವಲ ಒಂದೇ ದಿನಕ್ಕೆ ಸೀಮಿತವಾಗದೆ, ಪ್ರತಿನಿತ್ಯ ತೊಡಗಿಸಿಕೊಳ್ಳಬೇಕು. ಇದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ದಿಯಾಗುತ್ತದೆ. ಪತ್ರಕರ್ತರರು ತಮ್ಮ ದಿನನಿತ್ಯದ ಕೆಲಸದ ಒತ್ತಡದ ನಡುವೆಯೂ ಕ್ರೀಡೆಗಳಿಗಾಗಿ ಸಮಯ ಮೀಸಲಿಡಬೇಕು. ಪತ್ರಕರ್ತರಿಗಾಗಿ ಕ್ರೀಡಾಕೂಟ ಆಯೋಜಿಸಿರುವುದು ಶ್ಲಾಘನೀಯವೆಂದರು.
ಮುಖ್ಯಾತಿಥಿಯಾಗಿ ಆಗಮಿಸಿದ ಬ್ಯಾಡ್ಮಿಂಟನ್ ಆಟಗಾರರಾದ ಸತೀಶ್ ಕ್ರೀಡೆಯಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಕ್ರೀಡಾಕೂಟವನ್ನು ಉದ್ದೇಶಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಗುರುನಾಥ್ ಹಾಗೂ ರಾಯಚೂರು ರಿಪೋರ್ಟ್‌ರ್ಸ್ ಗಿಲ್ಡ್ ಅಧ್ಯಕ್ಷ ಚೆನ್ನಬಸವಣ್ಣ ಮಾತನಾಡಿದರು.
ಶೆಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದರು. ಶೆಟಲ್ ಬ್ಯಾಡ್ಮಿಂಟನ್ ಡಬಲ್ಸ್ ನಲ್ಲಿ ಪ್ರಥಮ ಸ್ಥಾನ, ದ್ವಿತೀಯ ಸ್ಥಾನ, ತೃತೀಯ ಸ್ಥಾನ ಪಡೆದರು. ಕ್ರೀಡಾಕೂಟದಲ್ಲಿ ಸ್ಪರ್ಧಿಗಳಾಗಿ ೪೦ ಜನ ಪತ್ರಕರ್ತರು ಭಾಗವಹಿಸಿದ್ದರು. ಶೆಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ ನಿರ್ಣಾಯಕರಾಗಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುರು ಅಂಬಿಗೇರ್ ಹಾಗೂ ಪ್ರವೀಣ್ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ರಾಯಚೂರು ರಿಪೋರ್ಟ್‌ರ್ಸ್ ಗಿಲ್ಡ್ ಪ್ರಧಾನ ಕಾರ್ಯದರ್ಶಿ ವಿಜಯ್ ಜಾಗಟಗಲ್ ಸ್ವಾಗತಿಸಿ, ನಿರೂಪಿಸಿದರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯರಾದ ಶಿವಮೂರ್ತಿ ಹಿರೇಮಠ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಪಾಷಾ ಹಟ್ಟಿ, ಹಿರಿಯ ಪತ್ರಕರ್ತ ವೆಂಕಟ ಸಿಂಗ್, ನಾಗರಾಜ್ ಚಿನಗುಂಡಿ, ವೆಂಕಟೇಶ ಹೂಗಾರ್ ಸೇರಿದಂತೆ ಇನ್ನಿತರ ಪತ್ರಕರ್ತರು ಭಾಗಿಯಾಗಿದ್ದರು. ನ.೨೦ ರಂದು ರವಿವಾರ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರಿಕೆಟ್ ಟೂರ್ನ್‌ಮೆಂಟ್ ನಡೆಯಲಿದೆಂದು ಇದೇ ಸಂದರ್ಭದಲ್ಲಿ ತಿಳಿಸಲಾಯಿತು.