ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಎಲ್ಲಾ ಮಕ್ಕಳ ಆರೋಗ್ಯ ತಪಾಸಣೆ

ಕಲಬುರಗಿ:ಮಾ.5:ರಾಷ್ಟ್ರೀಯ ಆರೋಗ್ಯ ಅಭಿಯಾನದ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಜಿಲ್ಲೆಯಾದ್ಯಂತ 20 ತಂಡಗಳು ಕಾರ್ಯನಿರ್ವಹಿಸುತ್ತಿದ್ದು, ಒಂದು ತಂಡದಲ್ಲಿ ಇಬ್ಬರು ವೈದ್ಯಾಧಿಕಾರಿಗಳು ಇದ್ದು, ತಲಾ ಓರ್ವ ಶುಶ್ರೂಷಣಾಧಿಕಾರಿಗಳು ಹಾಗೂ ನೇತ್ರ ಸಹಾಯಕರು ಕಾರ್ಯನಿರ್ವಹಿಸುತ್ತಿದ್ದು, ಹುಟ್ಟಿನಿಂದಲೆ ಬರುವ ಹಲವಾರು ರೋಗಗಳಿಂದ ಬಳಲುತ್ತಿರುವ ಮಕ್ಕಳಿಗೆ ಶೀಘ್ರ ಪತ್ತೆ ಮತ್ತು ಸೂಕ್ತ ಚಿಕಿತ್ಸೆ ನೀಡುವ ಮುಖಾಂತರ ಮಕ್ಕಳಲ್ಲಿ ನ್ಯೂನ್ಯತೆ ಮತ್ತು ಮರಣ ಪ್ರಮಾಣ ಕಡಿಮೆ ಮಾಡಲಾಗುತ್ತಿದೆ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
ಆರ್‍ಬಿಎಸ್‍ಕೆ ಕಾರ್ಯಕ್ರಮದಡಿ ಅಂಗನವಾಡಿ ಕೇಂದ್ರಗಳಲ್ಲಿಯ 1 ರಿಂದ 6 ವರ್ಷದ ಮಕ್ಕಳಿಗೆ ವರ್ಷದಲ್ಲಿ 2 ಬಾರಿ ಸರಕಾರಿ ಮತ್ತು ಸರಕಾರಿ ಅನುದಾನಿತ ಶಾಲಾ/ಕಾಲೇಜುಗಳಲ್ಲಿ 6 ರಿಂದ 18 ವರ್ಷದ ಎಲ್ಲಾ ಮಕ್ಕಳಿಗೆ ವರ್ಷದಲ್ಲಿ ಒಂದು ಬಾರಿ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ತೊಂದರೆ ಇರುವ ಮಕ್ಕಳಿಗೆ ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆಯನ್ನು ನೀಡಲಾಗುತ್ತದೆ.
ಕಲಬುರಗಿಯಲ್ಲಿ ಈ ವರ್ಷದಲ್ಲಿ ಒಟ್ಟು 542600 ಮಕ್ಕಳ ಗುರಿ ಇದ್ದು, ಅದರಲ್ಲಿ 492444 ಮಕ್ಕಳ ವೈದ್ಯಕೀಯ ತಪಾಸಣೆ ಈಗಾಗಲೆ ಮಾಡಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ತಪಾಸಣೆ ಮಾಡಿದ ಒಟ್ಟು 590767 ಮಕ್ಕಳ ಪೈಕಿ 187255 ರೋಗದಿಂದ ಬಳಲುತ್ತಿರುವುದು ಕಂಡುಹಿಡಿಯಲಾಗಿದ್ದು, ಅವರಿಗೆ ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ 142827 ಮಕ್ಕಳಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ.
ಆರ್‍ಬಿಎಸ್‍ಕೆ ಕಾರ್ಯಕ್ರಮದಡಿ ಸರಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆಗೆ ಸೌಲಭ್ಯವಿರದೆ ಇದ್ದಲ್ಲಿ ಎನ್.ಜಿ.ಓ ಆರೋಗ್ಯ ಸಂಘಗಳು ಹಾಗೂ ಖಾಸಗಿ ಆಸ್ಪತ್ರೆಗಳೊಂದಿಗೆ ಒoU ಮಾಡಿಕೊಂಡು ಶಸ್ತ್ರಚಿಕಿತ್ಸೆ ಅಗತ್ಯವಿರುವ ಮಕ್ಕಳಿಗೆ ರೆಫರ್ ಮಾಡಿ ಉಚಿತವಾಗಿ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ ಮಾಡಿಸಲಾಗುತ್ತಿದೆ.
ಸೀಳುತುಟಿ ಹಾಗೂ ಸೀಳು ಅಂಗುಳದಿಂದ ಬಳಲುತ್ತಿರುವ ಒಟ್ಟು 51 ಮಕ್ಕಳ ಹೃದಯ ರೋಗದಿಂದ ಬಳಲುತ್ತಿರುವ ಒಟ್ಟು 110 ಮಕ್ಕಳ ಹಾಗೂ ಇನ್ನಿತರ ರೋಗದಿಂದ ಬಳಲುತ್ತಿರುವ ಒಟ್ಟು 275ಕ್ಕಿಂತ ಹೆಚ್ಚು ಮಕ್ಕಳ ಶಸ್ತ್ರಚಿಕಿತ್ಸೆ ಮಾಡಿಸಲಾಗಿದೆ.
ಈ ಕಾರ್ಯಕ್ರಮದಡಿ ದೃಷ್ಟಿದೋಷವಿರುವ ಮಕ್ಕಳಿಗೆ ಉಚಿತವಾಗಿ ಕನ್ನಡಕವನ್ನು ವಿತರಿಸಲಾಗುತ್ತಿದೆ. 6 ವರ್ಷದಿಂದ 18 ವರ್ಷದ ಎಲ್ಲಾ ಮಕ್ಕಳಿಗೆ ವಾರಕ್ಕೊಮ್ಮೆ ಐರನ್ ಫೋಲಿಕ ಆಸಿಡ್ ಮಾತ್ರೆಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. 6 ತಿಂಗಳಿಗೊಮ್ಮೆ ಜಂತುಹುಳು ನಿವಾರಣಾ ಕಾರ್ಯಕ್ರಮದಡಿ 1 ರಿಂದ 19 ವರ್ಷದ ಎಲ್ಲಾ ಮಕ್ಕಳಿಗೆ ಅಲ್ಬೆಂಡೋಜೋಲ್ 400 mg ಮಾತ್ರೆಗಳನ್ನು ವಿತರಿಸಲಾಗುತ್ತಿದೆ.
ಆರ್.ಬಿ.ಎಸ್.ಕೆ. ಕಾರ್ಯಕ್ರಮದಡಿ ಒoU ಮಾಡಿಕೊಂಡ ಖಾಸಗಿ ಆಸ್ಪತ್ರೆಗಳ ತಜ್ಞ ವೈದ್ಯರನ್ನು ಕರೆಯಿಸಿ ತಾಲೂಕಾವಾರು ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡು ಆರ್.ಬಿ.ಎಸ್.ಕೆ. ತಂಡದವರು ಕಂಡುಹಿಡಿದ ನೂನ್ಯತೆಯಿರುವ ಮಕ್ಕಳನ್ನು ಮರು ಪರೀಕ್ಷೆ ಮಾಡಿಸಿ ಅವಶ್ಯಕತೆಯಿರುವ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.