ರಾಷ್ಟ್ರೀಯ ಬುಡಕಟ್ಟು ನೃತ್ಯೋತ್ಸವ

ರಾಯಚೂರು, ಜ.೦೬- ಜಿಲ್ಲೆಯಲ್ಲಿ ಜ. ೨೮, ರಿಂದ ೨೯ ವರೆಗೆ ರಾಷ್ಟ್ರಮಟ್ಟದ ಬುಡಕಟ್ಟು ನೃತ್ಯೋತ್ಸವ
ಕಾರ್ಯಕ್ರಮವನ್ನು ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ಸಂಬಂಧಸಿದ ಸೂಚನೆ ನೀಡಿದರು.
ಅವರಿಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕೃಷಿ ವಿಶ್ವವಿದ್ಯಾಲಯದಲ್ಲಿ ಬೆಳಿಗ್ಗೆ ೧೧ ಕಾರ್ಯಕ್ರಮ ಜರುಗಲಿದೆ. ನಗರದ ವಾಲ್ಮೀಕಿ ಪುತ್ಥಳಿಯಿಂದ ಮಹಾತ್ಮ ಗಾಂಧಿ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಸಲಾಗುವುದು. ನೃತ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ, ಕೇಂದ್ರ ಸಚಿವರು, ಸೇರಿದಂತೆ ವಿವಿಧ ಗಣ್ಯರು ಆಗಮಿಸಲಿದ್ದಾರೆ. ಗಣ್ಯರಿಗೆ ವಸತಿ ವಸತಿ ಸೌಕರ್ಯ ಕಲ್ಪಿಸಬೇಕು. ಸ್ಥಳೀಯ ಕಲಾ ತಂಡಗಳು ಅವಕಾಶ ನೀಡಬೇಕು ಎಂದು ಸೂಚನೆ ನೀಡಿದರು. ಊಟದ ವ್ಯವಸ್ಥೆ ಮಾಡಬೇಕು.
ಕಲಾ ತಂಡಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಲು ಸೂಚನೆ ನೀಡಿದರು. ವಿವಿಧ ಕ್ಷೇತ್ರಗಳಿಂದ ಜನರನ್ನು ಕರೆ ತರಲು ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಬುಡಕಟ್ಟು ಜನರನ್ನು ಒಂದೇ ವೇದಿಕೆಗೆ ಕರೆತರುವ ಮತ್ತು ಅವರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ನೃತ್ಯೋತ್ಸವ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಧಿಕಾರಿ ಶಶಿಧರ್ ಕುರೇರು, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ನಿಖಿಲ್ ಬಿ, ಶಶಿಕಾಂತ್ ಶಿವಪುರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ಮಂಗಳ ನಾಯಕ್, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.