ರಾಷ್ಟ್ರೀಯ ಮತದಾರರ ದಿನಾಚರಣೆಸೂಕ್ತ ನಾಯಕರ ಆಯ್ಕೆಗೆ ಮತದಾನ ಅಸ್ತ್ರ

ರಾಯಚೂರು,ಡಿ.೨೧- ಉತ್ತಮ ಅಡಳಿತಕ್ಕಾಗಿ ಸೂಕ್ತ ನಾಯಕರ ಆಯ್ಕೆ ಸಂವಿಧಾನ ನೀಡಿರುವ ಮತದಾನ ಹಕ್ಕು ಜನತೆಯ ಬಹು ದೊಡ್ಡ ಅಸ್ತ್ರ ಎಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ತುಕರಾಮ್ ಹೇಳಿದರು.
ಅವರಿಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಸ್ಪರ್ಧಾ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಚುನಾವಣೆಯಲ್ಲಿ ಮತ ಚಲಾಯಿಸುವ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ರಾಷ್ಟ್ರವನ್ನು ಕಟ್ಟುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ. ಪ್ರತಿಯೊಬ್ಬರಿಗೂ ಮತದಾರನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.ಮತದಾನದ ಹಕ್ಕನ್ನು ಚಲಾಯಿಸುವ ಬಗ್ಗೆ ಅರಿವನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮೂಡಿಸಬೇಕಾಗಿದೆ. ಎಲ್ಲ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವುದು ಮಹತ್ವದ್ದಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಗುರಿಯನ್ನು ಹೊಂದಬೇಕು ಎಂದರು.
ಈ ಸಂದರ್ಭದಲ್ಲಿ ಆರ್.ಇಂದಿರಾ, ಪ್ರಾಚಾರ್ಯ ಡಾ.ಯಂಕಣ್ಣ, ಸೋಮಶೇಖರ್ ದಂಡಪ್ಪ ಬಿರಾದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.