ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಧಾರವಾಡ, ಜ.13: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಧಾರವಾಡ, ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೇ (ಡಿಮ್ಹಾನ್ಸ್), ಧಾರವಾಡ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವಮೆಂಟ ಸಹಯೋಗದಲ್ಲಿ ಡಿಮ್ಹಾನ್ಸ್ ಸಂಸ್ಥೆಯ ಸಭಾಂಗಣದಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಪುಷ್ಪಲತಾ ಸಿ.ಎಮ್. ಅವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಯುವಜನಾಂಗವು ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು. ಒಳ್ಳೆಯ ಜೀವನದ ಮೌಲ್ಯಗಳನ್ನು ಅಳವಡಿಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ನಿರ್ಮಾಣಮಾಡಿಕೊಳ್ಳಬೇಕು. ಇದರಿಂದ ಪಾಲಕರು ತಮ್ಮ ಮಕ್ಕಳಿಗೆ ಮಾಡಿದ ಪಾಲನೆ ಮತ್ತು ಪೆÇೀಷಣೆ ಸಾರ್ಥಕವಾಗುತ್ತದೆ ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ರಾಷ್ಟ್ರೀಯ ಯುವದಿನ ಕಾರ್ಯಕ್ರಮಗಳು ಸಾರ್ಥಕವಾಗಬೇಕಾದರೆ ಯುವ ಜನಾಂಗವು ಒಳ್ಳೆಯ ಮಾರ್ಗದಲ್ಲಿ ಮುನ್ನಡೆಯಬೇಕು, ಕಾನೂನು ಉಲ್ಲಂಘನೆ ಮಾಡುವಂತಹ ಕೆಲಸಗಳನ್ನು ಮಾಡಬಾರದು. ದೇಶದ ಅಭಿವೃದ್ದಿಗೆ ಯುವ ಜನಾಂಗವು ಕೈಜೊಡಿಸಬೇಕು ಎಂದು ಹೇಳಿದರು.
ಸ್ವಾಮಿ ವಿವೇಕಾನಂದ ಯೂತ್ ಮೂವಮೆಂಟ್ ಹಿರಿಯ ವ್ಯವಸ್ಥಾಪಕ ಡಾ,ಮೋಹನಕುಮಾರ ಥಂಬದ, ಅವರು ಮಾತನಾಡಿ ಸ್ವಾಮಿ ವಿವೇಕಾಂದ ಯೂತ್ ಮೂವಮೆಂಟ್ ಸಂಸ್ಥೆಯಿಂದ ಹಲವಾರು ಕಾರ್ಯಕ್ರಮಗಳನ್ನು ಯವಜನಾಂಗದ ಅಭಿವೃದ್ದಿಯ ಸಲುವಾಗ ಮಾಡುತ್ತಾ ಬಂದಿದೆ. ಮಾದಕ ವಸ್ತುಗಳ ವಿರುದ್ದ ಜಾಗೃತಿ, ಆರೋಗ್ಯಕರ ಸಮಾಜಕ್ಕಾಗಿ ಯುವ ಜನಾಂಗದ ಪಾಲ್ಗೊಳ್ಳುವಿಕೆ ಹೀಗೆ ಹಲವು ಕಾರ್ಯಕ್ರಮಗಳನ್ನು ಮಾಡಲಾಗಿದೆ. ಇದರ ಮೂಲ ಉದ್ದೇಶ ಯುವಜನಾಂಗವು ತಮ್ಮ ಸಮಯವನ್ನು ಅನವಶ್ಯಕವಾಗಿ ಕಳೆಯದೇ ಒಳ್ಳೇಯ ದಾರಿಯಲ್ಲಿ ಮುನ್ನಡೆದು ಉತ್ತಮ ಭವಿಷ್ಯವನ್ನು ಮಾಡಿಕೊಳ್ಳುವುದಾಗಿದೆ ಎಂದು ತಿಳಿಸಿದರು. ಸ್ವಾಮಿ ವಿವೇಕಾನದರ ಸಾಧನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಡಿಮ್ಹಾನ್ಸ್ ಸಂಸ್ಥೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಸರಸ್ವತಿ ತೆನಗಿ ಅವರು ಮಾತನಾಡಿದರು.
ಮಾನಸಿಕ ಆರೋಗ್ಯ ವಿಮರ್ಶಾ ಮಂಡಳಿ ಅಧ್ಯರು ಹಾಗೂ ಬೆಳಗಾವಿ ಮತ್ತು ಕುಲಬರಗಿ ವಿಭಾಗ ಮತ್ತು ನಿವೃತ್ತ ಜಿಲ್ಲಾ ನ್ಯಾಯಾಧೀಶ ಡಿ.ಆರ್.ರೇಣಕೆ ಅವರು ಮಾತನಾಡಿ, ಇಂದಿನ ಯುವ ಜನಾಂಗವು ದುಶ್ಚಟಗಳಿಗೆ ಒಳಗಾಗದೇ ಸದೃಡ ಆರೋಗ್ಯವನ್ನು ಹೊಂದಬೇಕು. ವ್ಯಸನಕ್ಕೆ ಅಂಟಿಕೊಂಡರೆ ಯಾವುದನ್ನು ಸಾಧನೆ ಮಾಡಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಬೇಕು. ಜೀವನದಲ್ಲಿ ಒಳ್ಳೆಯ ಸಾಧನೆಗಳನ್ನು ಮಾಡಲು ಮುಂದಾಗಬೇಕು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ 120 ಕ್ಕೂ ಹೆಚ್ಚು ನರ್ಸಿಂಗ್ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು. ಸ್ವಾಮಿ ವಿವೇಕಾನಂದ ಯೂತ್ ಮೂವಮೆಂಟ ಧಾರವಾಡ ಸಂಸ್ಥೆಯ ಸಿಬ್ಬಂದಿಗಳು ಭಾಗವಹಿಸಿದ್ದರು. ಮನೋವೈದ್ಯಕೀಯ ಸಮಾಜ ಕಾರ್ಯಕರ್ತರು ಹಾಗೂ ಸಂಯೋಜಕರು, ಸಮುದಾಯ ಮಾನಸಿಕ ಆರೋಗ್ಯ ಸೇವೆಗಳು ಡಿಮ್ಹಾನ್ಸ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾವೇರಿ ಕಿತ್ತೂರು ಅವರು ಪ್ರಾರ್ಥಿಸಿದರು. ಡಾ.ಸುನಂದಾ ಜಿ.ಟಿ. ಅವರು ಗಣ್ಯರನ್ನು ಸ್ವಾಗತಿಸಿದರು. ಅನಂತರಾಮು ಬಿ.ಜಿ. ಅವರು ವಂದಿಸಿದರು.