ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆ

ಕಲಬುರಗಿ ನ 30 ನಗರದ ಚಂದ್ರಕಾಂತ ಪಾಟೀಲ ಆಂಗ್ಲ ಮಾಧ್ಯಮ ಶಾಲೆಯ 3ನೇ ತರಗತಿಯ ವಿದ್ಯಾರ್ಥಿನಿ ಅನುಷ್ಕಾ .ಎಸ್.ರೆಡ್ಡಿ ,ನವೆಂಬರ್ 25. ರಂದು ಬೆಂಗಳೂರಿನಲ್ಲಿ ನಡೆದ 37ನೇ ರೋಲರ್ ಸ್ಕೇಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ 7-9 ವರ್ಷದೊಳಗಿನ ವಿಭಾಗದಲ್ಲಿ 2 ಬೆಳ್ಳಿ ಪದಕಗಳನ್ನು ಪಡೆದಿದ್ದಾಳೆ.
ಈ ವಿದ್ಯಾರ್ಥಿನಿ ದೆಹಲಿಯಲ್ಲಿ ಡಿಸೆಂಬರ್ 11 ರಿಂದ ನಡೆಯಲಿರುವ 59 ನೇ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
ಇಡೀ ಕಲ್ಯಾಣ ಕರ್ನಾಟಕ ಪ್ರದೇಶದಿಂದ ಎರಡು ಬಾರಿ ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆಯಾದ ಮೊದಲ ಸ್ಕೇಟರ್ ಈ ವಿದ್ಯಾರ್ಥಿನಿಯಾಗಿದ್ದಾಳೆ.