ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನ: 25 ರಂದು ಸಭೆ

ಬೀದರ್:ಜು. 25: ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಬಸವಕಲ್ಯಾಣದಲ್ಲಿ ಪ್ರಥಮ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನ ಹಮ್ಮಿಕೊಳ್ಳುವ ಪ್ರಯುಕ್ತ ಜುಲೈ 25 ರಂದು ಸಂಜೆ 5.30ಕ್ಕೆ ಇಲ್ಲಿಯ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಸಭೆ ಕರೆಯಲಾಗಿದೆ.

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ನೇತೃತ್ವ ವಹಿಸಲಿದ್ದಾರೆ. ಜಿಲ್ಲೆಯ ಪೂಜ್ಯರು, ಮಠಾಧೀಶರು, ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಅಧ್ಯಕ್ಷ ಬಸವರಾಜ ಧನ್ನೂರ ತಿಳಿಸಿದ್ದಾರೆ.

ಜಿಲ್ಲೆಯ ಬಸವ ಪರ ಸಂಘಟನೆಗಳು, ಲಿಂಗಾಯತ ಸಂಘಟನೆಗಳು, ಶರಣ ಸಮಾಜಗಳ ಸಂಘಟನೆಗಳ ಪದಾಧಿಕಾರಿಗಳು, ಲಿಂಗಾಯತ ಸಮಾಜದ ಬಾಂಧವರು ಸಭೆಯಲ್ಲಿ ಪಾಲ್ಗೊಂಡು ಸಲಹೆ, ಸೂಚನೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.