ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಗದಗ,ಮಾ1: ಗದಗ ತಾಲ್ಲೂಕಿನ ಲಕ್ಕುಂಡಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನವದೆಹಲಿ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಮತ್ತು ಜಿಲ್ಲಾ ಪಂಚಾಯತ್ ಗದಗ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಜರುಗಿತು.
ನೋಬೆಲ್‍ಪುರಸ್ಕೃತ ವಿಜ್ಞಾನಿ ಸರ್ ಸಿ.ವಿ.ರಾಮನ್ ಅವರು ಆವಿಷ್ಕರಿಸಿದ ರಾಮನ್‍ಪರಿಣಾಮದ ಕುರಿತು ವಿದ್ಶಾರ್ಥಿಗಳಿಗೆ ತಿಳಿಸಲಾಯಿತು.
ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮಲ್ಲಪ್ಪ ದಂಡಿನ್ ಉದ್ಘಾಟಿಸಿದರು, , ಮುಖ್ಯೋಪಾಧ್ಯಾಯ ಯಮನೂರಸಾಬ್ ತಕ್ಕಲಕೊಟೆ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ನಡುವಿನಮನಿ, ಜಿಲ್ಲಾ ಪಂಚಾಯತ್ ಯೋಜನಾ ಸಂಯೋಜಕರಾದ ಮಂಜುನಾಥ ತೋಟದ ಸೇರಿದಂತೆ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.