
ಸಂಜೆವಾಣಿವಾರ್ತೆ
ಕೊಟ್ಟೂರು: ಮಾ,1-ಪಟ್ಟಣದ ಕೊಟ್ಟೂರೇಶ್ವರ ಮಹಾವಿದ್ಯಾಲಯದ ಪ್ರಾಣಿ ಶಾಸ್ತ್ರ ವಿಭಾಗದಲ್ಲಿ ಸೈನ್ಸ್ ಫಾರಂ, ಐಕ್ಯೂ ಏ ಸಿ, ರಿಸರ್ಚ್ ಅಂಡ್ ಡೆವಲಪ್ಮೆಂಟ್ ಸೆಲ್ ಸಹಭಾಗಿತ್ವದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.
ಇದರ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಸಿದ್ದರಾಮ ಕಲ್ಮಠ ಮಾತಾನಾಡಿ ನಮ್ಮ ಭಾರತದ ಹೆಮ್ಮೆಯ ವಿಜ್ಞಾನಿ ಸರ್. ಸಿ. ವಿ. ರಾಮನ್ ಅವರ ಅಪೂರ್ವ ಸಾಧನೆಯ ನೆನಪಿನಲ್ಲಿ ಈ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನ ಎಂದು ಗುರುತಿಸಲಾಗಿದೆ. ಅವರು ೧೯೨೮ರ ಫೆಬ್ರವರಿ ೨೮ರಂದು ‘ರಾಮನ್ ಇಫೆಕ್ಟ್’ ಎಂದೇ ಪ್ರಸಿದ್ಧವಾದ ತಮ್ಮ ಅಧ್ಯಯನದ ವಿವರಗಳನ್ನು ಜಗತ್ತಿಗೆ ತಿಳಿಸಿದ್ದರು. ವಿಜ್ಞಾನದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಏಷ್ಯಾದ ಮೊಟ್ಟ ಮೊದಲ ವಿಜ್ಞಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶಾಂತ ಮೂರ್ತಿ ಬಿ ಕುಲಕರ್ಣಿ, ಆಡಳಿತ ಮಂಡಳಿಯ ಸದಸ್ಯರಾಗಿರುವ ಅಡಿಕೆ ಮಂಜುನಾಥ್, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಕೃಷ್ಣಪ್ಪ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಸಿ ಬಸವರಾಜ್, ಭೌತಶಾಸ್ತ್ರ ವಿಭಾಗದ ಬಿ.ಎಸ್. ಪಾಟೀಲ್ ಮತ್ತು ಶಿಕ್ಷಣ ಶಾಸ್ತ್ರದ ವಿಜಯಲಕ್ಷ್ಮಿ ಸಜ್ಜನ್, ರಮೇಶ್ ಉಪಸ್ಥಿತರಿದ್ದರು.
ಪ್ರಾಸ್ತವಿಕ ನುಡಿಯನ್ನು ಮುಖ್ಯಸ್ಥರಾದ ಡಾ. ಪೃಥ್ವಿರಾಜ್ ಸಿ. ಬೆಡ್ ಜರ್ಗಿ ನೆರವೇರಿಸಿದರು. ನಿರೂಪಣೆಯನ್ನು ಕುಮಾರಿ ನೆರವೇರಿಸಿದರು. ವಂದನಾರ್ಪಣೆಯನ್ನು ವಿದ್ಯಾರ್ಥಿ ರಾಘವೇಂದ್ರ ನಡೆಸಿಕೊಟ್ಟರು