ರಾಷ್ಟ್ರೀಯ ಶಿಕ್ಷಣ ನೀತಿಗೆ 3ನೇ ವರ್ಷದ ಸಂಭ್ರಮ : ಎನ್‍ಇಪಿ ಪರಿಣಾಮಕಾರಿಯಾಗಿ ಅನುಷ್ಠಾನ

ವಿಜಯಪುರ ಜು.31: ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕಳೆದ ಮೂರು ವರ್ಷಗಳಲ್ಲಿ ಪರಿಣಾಮಕಾರಿ ಅನುಷ್ಠಾನಗೊಳಿಸಲಾಗಿದೆ ಎಂದು ವಿಜಯಪುರ ಕೇಂದ್ರೀಯ ವಿದ್ಯಾಲಯದ ಕಾರ್ಯನಿರ್ವಾಹಕ ಪ್ರಾಂಶುಪಾಲರಾದ ಶ್ರೀಮತಿ ಗುಲ್ನಾಜ್ ಕೌರ್ ಹೇಳಿದರು.

ಶುಕ್ರವಾರ ನಗರದ ಅಫಜಲಪೂರ ಟಕ್ಕೆಯಲ್ಲಿರುವ ಕೇಂದ್ರೀಯ ವಿದ್ಯಾಲಯದ ಸಭಾಂಗಣದಲ್ಲಿ ಕೇಂದ್ರ ಸರ್ಕಾರ 2020ರಲ್ಲಿ ಜಾರಿಗೊಳಿಸಿದ ಎನ್‍ಇಪಿ 3ನೇ ವರ್ಷಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೂರು ವರ್ಷಗಳ ಹಿಂದೆ ಸರ್ಕಾರವು ಪರಿಚಯಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ನಮ್ಮ ರಾಷ್ಟ್ರದ ಪರಿಣಾಮಕಾರಿಯಾದ ಶೈಕ್ಷಣಿಕ ಗುರಿ ಹೊಂದಿದೆ. ಇದು ವಿದ್ಯಾರ್ಥಿಗಳ ವಿವಿಧ ಕೌಶಲ್ಯ ಬಳಸಿಕೊಂಡು ಅವರ ಕಲಿಕಾ ಅಗತ್ಯಗಳನ್ನು ಪರಿಹರಿಸಲು ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಮತ್ತು ಸವಾರ್ಂಗೀಣ ಅಭಿವೃದ್ಧಿಗೆ ಉತ್ತೇಜನ ನೀಡುವುದಾಗಿದೆ. ವಿನೂತನ ಬೋಧನಾ ವಿಧಾನಗಳ ಪರಿಚಯ, ತರಗತಿಗಳಲ್ಲಿ ತಂತ್ರಜ್ಞಾನದ ಬಳಕೆ, ಆಟ ಆಧಾರಿತ ಶಿಕ್ಷಣ ಮತ್ತು ಅನುಭವ ಕಲಿಕೆಗೆ ಒತ್ತು ನೀಡುವಂತಹ ನೀತಿಗೆ ಅನುಗುಣವಾಗಿ ಶಾಲಾ ಶಿಕ್ಷಣದಲ್ಲಿ ಕೈಗೊಂಡ ಪ್ರಮುಖ ಕ್ರಮಗಳ ಬಗ್ಗೆ ಎನ್ ಇಪಿ ಆದ್ಯತೆ ನೀಡುತ್ತದೆ ಎಂದು ಹೇಳಿದರು.

ವಿಜಯಪುರದ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ಸಸಿ ಇ.ಕೆ ಅವರು ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯು ಕಲಿಕೆಯ ವಾತಾವರಣ ಸೃಷ್ಟಿಸಲು ಮಾರ್ಗಸೂಚಿ ಒದಗಿಸಿದೆ. ಕೇಂದ್ರೀಯ ವಿದ್ಯಾಲಯ ವಿಜಯಪುರ ರಾಷ್ಟ್ರೀಯ ಶಿಕ್ಷಣ ನೀತಿ-2020ರ ತತ್ವಗಳನ್ನು ಅಳವಡಿಸಿಕೊಂಡಿದೆ. ಅದರಂತೆ ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆ, ವಿಮರ್ಶಾತ್ಮಕ ಚಿಂತನೆ ಮತ್ತು ಶೈಕ್ಷಣಿಕ ಬೆಳವಣಿಗೆಯ ವಿಷಯದಲ್ಲಿ ಗಮನಾರ್ಹ ಫಲಿತಾಂಶ ಬಂದಿದೆ ಎಂದು ಹೇಳಿದರು.

ಅಲಮಟ್ಟಿಯ ಜವಾಹರ್ ನವೋದಯ ವಿದ್ಯಾಲಯ, ಪ್ರಾಂಶುಪಾಲರಾದ ಶ್ರೀಮತಿ ಶಾಂತಿ ಪೌಲ್ ತಮ್ಮ ವಿದ್ಯಾಲಯದಲ್ಲಿ ಜಾರಿಯ ಕುರಿತು ವಿವರಿಸಿದರು. ಸಾಮಥ್ರ್ಯ ಮತ್ತು ಶೈಕ್ಷಣಿಕ ದೃಢತೆಯನ್ನು ಹೆಚ್ಚಿಸಿಕೊಂಡು ವಿದ್ಯಾರ್ಥಿಗಳ ಒಳಗೊಳ್ಳುವಿಕೆಯ ಅಗತ್ಯ ಮತ್ತು ಪ್ರಾಮುಖ್ಯತೆ ಕುರಿತು ಹೇಳಿದರು.

ವಿಜಯಪುರದ ಸಂಗನಬಸವ ವಸತಿ ಶಾಲೆಯ ಪ್ರಾಂಶುಪಾಲರು ಖ್ಯಾತ ಶಿಕ್ಷಣ ತಜ್ಞೆ ಶ್ರೀಮತಿ ಶರ್ಮಿಳಾ ಹೇಮಂತ್ ಅವರು, ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಎನ್‍ಇಪಿ-2020ರ ಮಹತ್ವದ ಕುರಿತು ಚರ್ಚಿಸಿದರು. ನೀತಿಯ ಯಶಸ್ವಿ ಅನುಷ್ಠಾನಗೊಳಿಸಲು ಶಾಲೆಗಳು, ಶಿಕ್ಷಕರು, ಪೆÇೀಷಕರು ಸಹಯೋಗದ ಅವಶ್ಯಕತೆ ಇದೆ ಎಂದು ಹೇಳಿದರು.

ಅಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದ ಉಪ ಪ್ರಾಂಶುಪಾಲರಾದ ದ್ಯಾನೇಶ್ವರ ತಾಯಡೆ ಅವರು ವಿದ್ಯಾರ್ಥಿಗಳ ಮೇಲೆ ಎನ್‍ಇಪಿಯ ಪ್ರಭಾವದ ಕುರಿತು ತಮ್ಮ ಅಭಿಪ್ರಾಯಗಳನ್ನು ಮತ್ತು ವಿಚಾರಗಳನ್ನು ತಿಳಿಸಿದರು.