ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನಾಚರಣೆ

ಕಲಬುರಗಿ:ಸೆ.25:ಕೃಷಿ ಮಹಾವಿದ್ಯಾಲಯ ಕಲಬುರಗಿ, ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ. ಡಾ. ಸುರೇಶ. ಎಸ್. ಪಾಟೀಲ್. ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥೆ ಸಮಾಜದ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ವಿದ್ಯಾರ್ಥಿಗಳಲ್ಲಿ ಶಿಸ್ತಿನ ಅರಿವನ್ನು ಮೂಡಿಸುತ್ತದೆ. ಎಂದು ಹೇಳಿದರು. ಗಣರಾಜ್ಯೋತ್ಸವಪಥಸಂಚಲನದಲ್ಲಿ,ರಾಷ್ಟ್ರೀಯ ಏಕೀಕರಣ ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಜರಂಗ ಸಿಂಗ ಚೌಹಣಾ, ಅತಿಥಿಗಳಾದ ಡಾ. ಕೆ. ಭವಾನಿ, ಎನ್. ಎಸ್. ಎಸ್ ಅಧಿಕಾರಿಗಳಾದ ಅಮೃತ ಜಿ,ನಿಂಗಪ್ಪಾ ದೊರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಶಿಕ್ಷ ಕೇತರ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.