ರಾಷ್ಟ್ರೀಯ ಸೇವಾ ಯೋಜನೆ ಸಮಾರೋಪ

ಕಲಬುರಗಿ,ಅ.17: ಏಳು ದಿನಗಳ ವಿಶೇಷ ಶಿರದಲ್ಲಿ ಎನ್ ಎಸ್ ಎಸ್ ಸ್ವಯಂಸೇವಕರು ಶ್ರಮದಾನದ ಜೊತೆಗೆ, ಜೀವನ ಮೌಲ್ಯಗಳು, ಸಾಂಕ್ರಮಿಕ ರೋಗಗಳ ನಿಯಂತ್ರಣ ಮತ್ತು ವಚನ ಸಾಹಿತ್ಯದಲ್ಲಿ ಸ್ತ್ರೀಯರ ಸ್ಥಾನಮಾನ ಕುರಿತು ವಿಶೇಷ ಉಪನ್ಯಾಸಗಳನ್ನು ಆಯೋಜಿಸಿ ಸಾಮಾಜಿಕ ಜಾಗೃತಿ ಮೂಡಿಸಿರುವ ಎನ್‍ಎಸ್‍ಎಸ್ ಕಾರ್ಯಚಟುವಟಿಕೆಗಳು ಶ್ಲಾಘನೀಯವಾದದ್ದು. ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಎನ್‍ಎಸ್‍ಎಸ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿ ಬಾಬುರಾವ್ ಜೋಳದಂಪಕ ಹೇಳಿದರು.
ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಸಾಮಾಜಿಕ ಮತ್ತು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಮುಖಿ ಕಾರ್ಯ ಮಾಡಬೇಕೆಂದು ಹೇಳಿದರು.
ಅತಿಥಿಗಳಾದ ಬಸವರಾಜ್ ಬಿರಾಜದಾರ್, ವಿಠ್ಠಲ್ ಚಿಂಚೋಳಿಕರ್, ಎನ್‍ಎಸ್‍ಎಸ್ ಕಾರ್ಯಕ್ರಮ ಅಧಿಕಾರಿ ಶ್ರೀದೇವಿ ಬಾವಿದೊಡ್ಡಿ ಮುಂತಾದವರು ಮಾತನಾಡಿದರು. ಪ್ರಾಂಶುಪಾಲರಾದ ದೇವನಗೌಡ ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಗೌಸುದ್ದೀನ್ ತುಮಕೂರಕರ್, ಶರಣಗೌಡ ಪಾಟೀಲ್, ಗುರುರಾಜ್ ಕುಲಕರ್ಣಿ, ನಾಗರತ್ನ ಇಂಡೆ, ಜಯಲಕ್ಷ್ಮಿ, ಎನ್. ಆರ್ ಕುಲಕರ್ಣಿ ಹಾಗೂ ಎನ್‍ಎಸ್‍ಎಸ್ ವಿದ್ಯಾರ್ಥಿ ಸ್ವಯಂಸೇವಕರು ಉಪಸ್ಥಿತರಿದ್ದರು.