ರಾಷ್ಟ್ರ ಧ್ವಜ ಕೊರತೆ ಆಗದಂತೆ ಕ್ರಮವಹಿಸಿ – ಎಡಿಸಿ

ಮನೆ ಮನೆಗೆ ಹರ್ ಘರ್ ತಿರಂಗ ಹರಿಸಲು ಸೂಚನೆ
ರಾಯಚೂರು, ಆ.೬-೭೫ನೇ ಸ್ವಾತಂತ್ರ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆದ್ಯಾದಂತ ಆ.೧೩ ರಿಂದ ೧೫ ವರಗೆ ಮನೆ ಮನೆಯ ಮೇಲೆ ಹರ್ ಘರ್ ತಿರಂಗ ರಾಷ್ಟ್ರಧ್ವಜ ಹರಿಸುವ ನಿಟ್ಟಿನಲ್ಲಿ ರಾಷ್ಟ್ರ ಧ್ವಜಗಳು ಕೊರತೆ ಆಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅಪಾರ ಜಿಲ್ಲಾಧಿಕಾರಿ ದುರುಗೇಶ್ ಕೆ. ಆರ್ ಅವರು ಸಂಬಂಧಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರಿಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹರ್ ಘರ್ ತಿರಂಗ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ, ಅವರು ಜಿಲ್ಲೆಯಲ್ಲಿ ದೇಶ ಅಭಿಮಾನಿ ತೋರಿಸಲು ಪ್ರತಿ ಮನೆಯ ಮೇಲೆ ಸರಕಾರಿ ಕಚೇರಿ, ಖಾಸಗಿ ಸಂಸ್ಥೆಗಳ ಮೇಲೆ ಮತ್ತು ಸಂಘ ಸಂಸ್ಥೆಗಳ ಕಟ್ಟಡ ಮೇಲೆ ಹರ್ ಘರ್ ತಿರಂಗ ರಾಷ್ಟ್ರ ಧ್ವಜವನ್ನು ಹರಿಸಲು ಸೂಚನೆ ನೀಡಿದರು.
ಗ್ರಾಮ ಪಂಚಾಯತ್ ಮತ್ತು ಪಟ್ಟಣ ಪಂಚಾಯತ್ ಮಟ್ಟದಲ್ಲಿ ಈಗಾಗಲೇ ರಾಷ್ಟ್ರ ಧ್ವಜಗಳು ಮನೆ ಮನೆಗೆ ತಲುಪಿಸಲು ಕ್ರಮ ವಹಿಸಬೇಕು ಎಂದರು.
೭೫ನೇ ಸ್ವಾತಂತ್ರ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲೆಯಲ್ಲಿ ವಿಶೇಷವಾಗಿ ಆಚರಣೆ ಮಾಡಲು ವಿವಿಧ ಕಾರ್ಯಕ್ರಮಗಳು ಹಮ್ಮಿಕೊಳ್ಳಲು ಸಲಹೆ ಸೂಚನೆ ನೀಡಬೇಕು ಎಂದರು.
ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಂದ ಮಾಹಿತಿ ಪಡೆದು ಹರ್ ಘರ್ ತಿರಂಗ ರಾಷ್ಟ್ರಧ್ವಜ ಕೊರತೆ ಆಗದಂತೆ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.
ರಾಷ್ಟ್ರಕ್ಕೆ ಮತ್ತು ರಾಷ್ಟ್ರ ಧ್ವಜಕ್ಕೆ ಗೌರವ ಕೊಡುವ ನಿಟ್ಟಿನಲ್ಲಿ ಧ್ವಜಗಳು ಕೊರತೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ರಜನಿಕಾಂತ್, ನಗರಸಭೆ ಆಯುಕ್ತ ಗುರುಲಿಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ಮಂಗಳ ನಾಯಕ್, ನಗರಸಭೆ ಅಧಿಕಾರಿ ಶಕೀಲ್, ಪಶುಪಾಲನ ಮತ್ತು ಪಶುವೈದ್ಯಕೀಯ ಇಲಾಖೆ ಅಧಿಕಾರಿ ಶಿವಣ್ಣ, ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಬಾಬು ಬಳಗನೂರು,ಬಸವರಾಜ್, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.