ರಾಷ್ಟ್ರ ಮಟ್ಟದ ವಾಲಿಬಾಲ್ ಟೂರ್ನಿಗೆ ಆಯ್ಕೆ

ಚಿಕ್ಕನಾಯಕನಹಳ್ಳಿ, ಅ. ೨೯- ತಾಲ್ಲೂಕಿನ ಪ್ರತಿಭೆ ಸಂತೋಷ್ ಸೋಮಶೇಖರ್ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿ ನವಂಬರ್ ತಿಂಗಳಿನಲ್ಲಿ ಜಮ್ಮು-ಕಾಶ್ಮೀರದಲ್ಲಿ ನಡೆಯುವ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾನೆ.
ಸೆಪ್ಟೆಂಬರ್ ೨೨ ಮತ್ತು ೨೩ ರಂದು ಮೈಸೂರಿನಲ್ಲಿ ನಡೆದ ೧೪ ವರ್ಷದೊಳಗಿನ ಬಾಲಕರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ತಂಡದ ಉಪನಾಯಕನಾಗಿ ಮತ್ತು ಉತ್ತಮ ರಕ್ಷಣಾತ್ಮಕ ಆಟಗಾರ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿ ಸಂತೋಷ್ ಸಾಧನೆಗೆ ಶಿಕ್ಷಕರು, ಪೋಷಕರು ಹಾಗೂ ತಾಲ್ಲೂಕಿನ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.