ರಾಸಲೀಲೆ ದೇವನಹಳ್ಳಿಯ ಟೆಕ್ಕಿ ಮನೆ ಎಸ್ ಐಟಿ ಶೋಧ

Many CDs on white background

ಬೆಂಗಳೂರು, ಮಾ.೧೪-ರಷ್ಯಾದಲ್ಲಿ ಅಪ್’ಲೋಡ್ ಆದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯನ್ನು ಸಾಮಾಜಿಕ ಜಾಲತಾಣಕ್ಕೆ ಅಪ್‌ಲೋಡ್ ಮಾಡಿದ ಸಾಫ್ಟ್‌ವೇರ್ ಇಂಜಿನಿಯರ್ ನ ದೇವನಹಳ್ಳಿಯ ಮನೆಯ ಮೇಲೆ ಎಸ್‌ಐಟಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಸಿಡಿಯು ತಾಂತ್ರಿಕ ತಜ್ಞರ ಪ್ರಕಾರ ರಷ್ಯಾದಲ್ಲಿಯೇ ಅಪ್ಲೋಡ್ ಮಾಡುವಾಗ ಸರ್ವರ್ ಹ್ಯಾಕ್ ಮಾಡಲಾಗಿದ್ದು
ಪೊಲೀಸ್ ಮೂಲಗಳ ಪ್ರಕಾರ, ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ರಷ್ಯಾದ ಸರ್ವರ್ ಅನ್ನು ಹ್ಯಾಕ್ ಮಾಡುವ ಮೂಲಕ ಸಿಡಿಯನ್ನು ಸಾಮಾಜಿಕ ಜಾಲತಾಣಕ್ಕೆ ಅಪ್‌ಲೋಡ್ ಮಾಡಿದ ಸಾಫ್ಟ್‌ವೇರ್ ಇಂಜಿನಿಯರ್ ಜೊತೆಗೆ ಸಂಪರ್ಕ ಹೊಂದಿದ್ದಾರೆಂದು ಹೇಳಿವೆ.
ರಷ್ಯಾದ ಸರ್ವರ್ ಹ್ಯಾಕ್ ಮಾಡಿದ್ದ ಮನೆ ದೇವನಹಳ್ಳಿಯಲ್ಲಿದ್ದು, ಈ ಮನೆಯ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕುಟುಂಬಸ್ಥರನ್ನೂ ವಿಚಾರಣೆಗೊಳಪಡಿಸಿದ್ದಾರೆ.
ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಐವರು ವ್ಯಕ್ತಿಗಳೂ ಈತನೊಂದಿಗೆ ಹಣ ವರ್ಗಾವಣೆ ಮಾಡಿಕೊಂಡಿರುವ ದಾಖಲೆಗಳು ಪೊಲೀಸರಿಗೆ ದೊರಕಿವೆ. ಈ ಐವರ ಬ್ಯಾಂಕ್ ಖಾತೆಗಳಿಂದ ಲಕ್ಷಾಂತರ ಹಣ ವರ್ಗಾವಣೆಯಾಗಿರುವುದು ಕಂಡು ಬಂದಿದೆ.
ಪತ್ರಕರ್ತನೊಂದಿಗೆ ವಿಡಿಯೋದಲ್ಲಿ ಮಾತನಾಡಿರುವ ಮಹಿಳೆಯ ವಿಡಿಯೋವನ್ನು ವಶಕ್ಕೆ ಪಡೆಯಲಾಗಿದ್ದು, ಮಹಿಳೆಯ ಚಲನವಲನದ ಮೇಲೆ ಕಣ್ಗಾವಲು ಇರಿಸಲಾಗಿದೆ. ಪ್ರಾಥಮಿಕ ತನಿಖೆಯ ಭಾಗವಾಗಿ ಮಹಿಳೆಯ ಹೇಳಿಕೆಯನ್ನೂ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಈ ನಡುವೆ ಪ್ರಕರಣ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಅಧಿಕಾರಿಗಳು ಆರೋಪಿಗಳಿಗಾಗಿ ಬೀದರ್, ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲೂ ಹುಡುಕಾಟ ಆರಂಭಿಸಿದ್ದಾರೆಂದು ವರದಿಗಳು ತಿಳಿಸಿವೆ.