ರಾಸಲೀಲೆ ಸಿಡಿ ಜಾರಕಿಹೊಳಿ‌ ವಿರುದ್ಧ ಇಡಿಗೆ ದೂರು

ಬೆಂಗಳೂರು,ಮಾ.23- ರಾಸಲೀಲೆ ಸಿಡಿ ಪ್ರಕರಣದಲ್ಲಿ ಹಣದ ವಹಿವಾಟು ನಡೆದಿದೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ದೂರು ಸಲ್ಲಿಕೆಯಾಗಿದೆ.
ಮಾ.9ರಂದು ಶಾಸಕ ರಮೇಶ್ ಜಾರಕಿಹೊಳಿ ಅವರು, ಸಿಡಿ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಲು ಸುಮಾರು 5ರಿಂದ 20 ಕೋಟಿ ಹಾಗೂ 100 ಕೋಟಿವರೆಗೂ ಹಣದ ವಹಿವಾಟು ನಡೆದಿದ್ದು, ದೃಶ್ಯದಲ್ಲಿರುವ ಯುವತಿಗೆ 2 ಫ್ಲ್ಯಾಟ್ ಗಳನ್ನು ಕೊಡಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಬಹಿರಂಗ ಹೇಳಿಕೆ ನೀಡಿದ್ದರು.
ಆದ್ದರಿಂದ ಹಣದ ವಹಿವಾಟಿನ ಕುರಿತು ತನಿಖೆ ನಡೆಸಿ, 2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.