ರಾಸಲೀಲೆ ಸಿಡಿ ಯುವತಿಗೆ ವೈದ್ಯಕೀಯ ಪರೀಕ್ಷೆ

ಬೆಂಗಳೂರು,ಮಾ.೩೧-ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಎಸ್‌ಐಟಿ ತನಿಖಾಧಿಕಾರಿಗಳು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.
ಆಡುಗೋಡಿಯ ವಿಚಾರಣಾ ಕೇಂದ್ರದಿಂದ ಈಗಾಗಲೇ ತನಿಖಾಧಿಕಾರಿ ಕವಿತಾ ನೇತೃತ್ವದ ತಂಡ ಪ್ರತ್ಯೇಕ ಮೂರು ವಾಹನಗಳಲ್ಲಿ ಬಿಗಿ ಭದ್ರತೆಯೊಂದಿಗೆ ಬೌರಿಂಗ್ ಆಸ್ಪತ್ರೆಗೆ ಯುವತಿಯನ್ನು ಕರೆತಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.
ವೈದ್ಯಕೀಯ ಪರೀಕ್ಷೆ ಬಳಿಕ ಎಸ್?ಐಟಿ ಅಧಿಕಾರಿಗಳು ನೇರವಾಗಿ ಆಡುಗೋಡಿಗೆ ಕರೆತಂದು ಮತ್ತೆ ವಿಚಾರಣೆ ನಡೆಸಿದ್ದಾರೆ. ಈಗಾಗಲೇ ವಿಚಾರಣಾ ಕೇಂದ್ರಕ್ಕೆ ಎಸ್‌ಐಟಿ ಮುಖ್ಯಸ್ಥ ಸೌಮೆಂದು ಮುಖರ್ಜಿ ಆಗಮಿಸಿದ್ದು, ಮುಂದಿನ ಹಂತದ ವಿಚಾರಣೆಗೆ ಸಿದ್ಧತೆ ನಡೆಸಿಕೊಂಡಿದ್ದಾರೆ.