ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ ತನಿಖೆಗೆ ಬೊಮ್ಮಾಯಿ ಆದೇಶ

ಬೆಂಗಳೂರು, ನ 11- ನಗರದ ರಾಸಾಯನಿಕ ಕಾರ್ಖಾನೆಯ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಂಬಂಧಿಸಿದಂತೆ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಖಾನೆಯಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಯಾಗಿದೆ ಎಂದು ತಿಳಿಸಿದರು.
ಕಾರ್ಖಾನೆ. ನಿರ್ಮಿಸಲು ಬಿಬಿಎಂಪಿ ಸೇರಿದಂತೆ ಅಗ್ನಿಶಾಮಕ ಇಲಾಖೆ, ಪರಿಸರ ಇಲಾಖೆಗಳಿಂದ ಸಂಸ್ಥೆಯ ಮಾಲೀಕರು ಅನುಮತಿ ತೆಗೆದು ಕೊಂಡಿರುವ ಆಂಡರ್ಸನ್ ಬಗ್ಗೆ ತನಿಖೆ ನಡೆಸಲು ಆಯುಕ್ತರಿಗೆ ಸೂಚಿಸಿದ್ದೇನೆ. ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ಕೊಳ್ಳಲಾಗುವುದು ಎಂದು ವಿವರಿಸಿದರು.
ರಸಾಯನಿಕ ಕೈಗಾರಿಕೆ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿಯನ್ನು 48 ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿ ನಂದಿಸಲಾಗಿದೆ. ಗೋದಾಮಿನಲ್ಲಿ ಸ್ಪೋಟಕ ಮತ್ತು ಅಪಾಯಕಾರಿ ವಸ್ತುಗಳನ್ನು ಇಡಲು ಅನುಮತಿ ಇರುವ ಬಗ್ಗೆಯೂಮಾಹಿತಿ ಪಡೆಯುತ್ತಿದ್ದೇನೆ.ಇದನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಿದ್ದೇವೆ ಎಂದರು.