ರಾಸಾಯನಿಕ ಸಿಂಪಡಣೆ

ಲಕ್ಷ್ಮೇಶ್ವರ,ಮೇ5: ತಾಲೂಕಿನ ಗೋನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಡೆಯರ ಮಲ್ಲಾಪುರ ಗ್ರಾಮದಲ್ಲಿ ನಿನ್ನೆ ಕೊರೊನಾ ಪಾಸಿಟಿವ್ ಪ್ರಕರಣ ಒಂದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಸೋಂಕು ಹರಡದಂತೆ ತಡೆಯಲು ರಾಸಾಯನಿಕ ಸಿಂಪಡಣೆಯನ್ನು ಕೈಗೊಳ್ಳಲಾಯಿತು ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಪಂ ಸದಸ್ಯ ಪದ್ಮ ಪಾಟೀಲ್ ಅವರು ಗ್ರಾಮದಲ್ಲಿ ಸೋಂಕು ಹರಡದಂತೆ ಮುಂಜಾಗೃತಾ ಕ್ರಮ ಕೈಗೊಂಡಿರುವ ಗ್ರಾಪಂನವರು ಗ್ರಾಮದ ಎಲ್ಲಾ ಓಣಿಗಳಲ್ಲಿ ರಾಸಾಯನಿಕ ಸಿಂಪಡಣೆಯನ್ನು ಮಾಡಲಾಗುತ್ತಿದೆ ಎಂದರು.