
ಕಲಬುರಗಿ,ಮಾ.28: ಎಐಸಿಸಿ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವರಿಷ್ಠ ನಾಯಕ ರಾಹುಲ್ ಗಾಂಧಿಜೀಯವರ ಮೇಲೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ವಿಭಾಗಗಳಿಂದ ಮಾರ್ಚ್ 29ರಂದು ಬೆಳಿಗ್ಗೆ 11 ಗಂಟೆಗೆ ನಗರದ ಇಂಧಿರಾ ಸ್ಮಾರಕ ಭವನದ ಹತ್ತಿರವಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಪ್ರತಿಮೆ ಎದುರುಗಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ ಅವರು ತಿಳಿಸಿದ್ದಾರೆ.
ಪತ್ರಿಭಟನೆಗೆ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಪುರ, ಪಂಚಾಯಿತಿ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು, ಹಿರಿಯರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಆಗಮಿಸಬೇಕೆಂದು ಅವರು ಹೇಳಿಕೆಯಲ್ಲಿ ಕೋರಿದ್ದಾರೆ.