ರಾಹುಲ್ ಆಸ್ತಿ ೨೦.೪ ಕೋಟಿ ರೂ.

ಕೋಝಿಕೋಡ್,ಏ.೪-ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ೨೦.೪ ಕೋಟಿ ಮೌಲ್ಯದ ಆಸ್ತಿ ಹೊಂದಿದ್ದು ೨೦೧೯ರ ಬಳಿಕ ಸುಮಾರು ೬ ಕೋಟಿ ರೂಪಾಯಿ ಮೌಲ್ಯ ಹೆಚ್ಚಾಗಿದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.
ಜೊತೆಗೆ ೧೮ ಪ್ರಕರಣಗಳಲ್ಲಿ ’ಮೋದಿ ಉಪನಾಮ’ ಹೇಳಿಕೆಗಾಗಿ ಗುಜರಾತ್ ನ್ಯಾಯಾಲಯ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಘೋಷಿಸಿದ್ದು, ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಅಫಿಡವಿಟ್‌ನಲ್ಲಿ ಸಲ್ಲಿಸಿದೆ.
ರಾಹುಲ್ ಗಾಂಧಿ ಅವರ ಬಳಿ ಕೈಯಲ್ಲಿ ೫೫,೦೦೦ ರೂಪಾಯಿ ನಗದು ಮತ್ತು ಅವರ ಎರಡು ಬ್ಯಾಂಕ್ ಖಾತೆಗಳಲ್ಲಿ ೨೬,೨೫,೧೫೭ ರೂಪಾಯಿ ಇದೆ ಎಂದು ಮಾಹಿತಿ ನೀಡಿದ್ದಾರೆ.
ತಮ್ಮ ಆಸ್ತಿಯ ಮೂಲಕ ಕಳೆದ ಐದು ವರ್ಷಗಳಲ್ಲಿ ಕೇವಲ ೬ ಕೋಟಿ ರೂಪಾಯಿಗಳ ಆದಾಯ ಬಂದಿದೆ. ಹೀಗಾಗಿ ಒಟ್ಟಾರೆ ಆಸ್ತಿಯ ಮೌಲ್ಯ ೨೦.೪ ಕೋಟಿ ರೂಪಾಯಿ ಎಂದು ತಿಳಿಸಿದ್ದಾರೆ
ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ಅಮೀಥಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ೨೦೧೯ರಲ್ಲಿ ಪರಾಭವ ಗೊಂಡ ಬಳಿಕ ಕಳೆದ ಬಾರಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಇದೀಗ ಎರಡನೇ ಬಾರಿಗೆ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ