ರಾಹುಲ್ ಗಾಂಧಿಗೆ ಕೊರೊನಾ

ನವದೆಹಲಿ, ಏ.20- ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಗಾಗದ ವೇಳೆ ಸೋಂಕು ಪಾಸಿಟೀವ್ ಬಂದಿದೆ ಎಂದು ತಿಳಿಸಿದ್ದಾರೆ.
ತಮ್ಮ ಜತೆ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಂಡು ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಅವರು ಮನವಿ ಮಾಡಿದ್ದಾರೆ.
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ವೇಳೆ ಕೇರಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಿದ್ದರು.

ಕೇಜ್ರಿವಾಲ್ ಪತ್ನಿಗೂ ಸೋಂಕು

ಈ ಮಧ್ಯೆ ದೆಹಲಿ ಸಿಎಂ ಅರವಿಂದ ಕೇಜ್ರುವಾಲ್ ಪತ್ನಿ ಸುನೀತಾ ಅವರಿಗೂ ಸೋಂಕು ತಗುಲಿದೆ. ಆದ್ದರಿಂದ ಕೇಜ್ರಿವಾಕ್ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.