ರಾಹುಲ್ ಗಾಂಧಿ ಅನರ್ಹತೆ ಪ್ರಜಾತಂತ್ರ ವಿರೋಧಿ: ಬಿಜೆಪಿ ವಿರುದ್ಧ ವಾಗ್ದಾಳಿ

ಲಿಂಗಸುಗೂರ,ಮಾ.೨೭- ಕಾಂಗ್ರೆಸ್ ಪಕ್ಷದ ಯುವ ನಾಯಕ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಿದ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ಮುಖಂಡ ರುದ್ರಯ್ಯ ಇವರು ಕೇಂದ್ರದ ಎನ್‌ಡಿಎ ಆಡಳಿತ ವಿರುದ್ಧ ವಾಗ್ದಾಳಿ ನಡೆಸಿದರು.
ದೇಶದಲ್ಲಿ ಬಿಜೆಪಿ ಸರ್ಕಾರ ಪ್ರಜಾತಂತ್ರವನ್ನು ಕಗ್ಗೊಲೆ ಮಾಡವ ಮೂಲಕ ದಮನ ಮಾಡಿ ದೇಶದಲ್ಲಿ ಅರಾಜಕತೆ ಸೃಷ್ಟಿ ಮಾಡಿದೆ ಜನಸಾಮಾನ್ಯರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದ್ದಾರೆ ಎಂದು ರುದ್ರಯ್ಯ ಇವರು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರವು ಇಡಿ ಐಟಿಸಿಬಿಐ ಅಧಿಕಾರಿಗಳನ್ನು ತಮ್ಮ ಮನಸ್ಸಿಗೆ ಬಂದಂತೆ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡು ದುರ್ಬಳಕೆ ಮಾಡಿ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ಗುಜರಾತ್ ರಾಜ್ಯದ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರೆಂದು ಪರಿಗಣಿಸಿ ಎರಡು ವರ್ಷ ಶಿಕ್ಷೆ ವಿಧಿಸಿದೆ. ಆದರೆ ಇದರ ಬೆನ್ನಲ್ಲೇ ಕೇಂದ್ರ ಸರ್ಕಾರದ ನೀತಿಗಳು ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ರುದ್ರಯ್ಯ ಕುಟುಕಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇವರನ್ನು ಏಕಾಏಕಿ ಸದಸ್ಯತ್ವದಿಂದ ಅನಹರತೆಗೊಳಿಸಿರುವದು ಬಿಜೆಪಿ ಸರ್ಕಾರದ ತರಾತುರಿಯ ಕ್ರಮವಾಗಿದೆ.
ಇದರ ಹಿಂದೆ ಬಿಜೆಪಿ ನಾಯಕರ ಷಡ್ಯಂತ್ರ ಅಡಗಿದೆ ಕಾಂಗ್ರೆಸ್ ಪಕ್ಷದ ಟಿಕೇಟ್ ಆಕಾಂಕ್ಷಿ ರುದ್ರಯ್ಯ ಆರೋಪಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ರುದ್ರಭೂಪಾಲ ನಾಡಗೌಡ, ಕಾಳಾಪುರ ಸಂಗಣ್ಣ ಬಯ್ಯಾಪುರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮಾಧವ ನೇಲಗಿ, ನಾಗನಗೌಡ, ತುರಡಗಿ ಶರಣಪ್ಪ, ಮೇಟಿ ಹೆಸರೂರ ಶರಣಯ್ಯ ಸ್ವಾಮಿ ಗೊರೆಬಾಳ ಸೇರಿದಂತೆ ಇತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.