ರಾಹುಲ್ ಗಾಂಧಿ ವಿಚಾರ ಮಂಚ್ ನೂತನ ಅಧ್ಯಕ್ಷರಾಗಿ ಮಂಜುನಾಥ್ ಆಯ್ಕೆ

ಪಿರಿಯಾಪಟ್ಟಣ, ನ.15: ರಾಹುಲ್ ಗಾಂಧಿ ವಿಚಾರ ಮಂಚ್ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ವೀರಶೈವ ಲಿಂಗಾಯಿತ ಯುವ ಮುಖಂಡ ಕಿರಂಗೂರು ಗ್ರಾಮದ ಮಂಜುನಾಥ್ ಆಯ್ಕೆಯಾದರು.
ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್ ಹಾಗೂ ಮಾಜಿ ಶಾಸಕ ಕೆ.ವೆಂಕಟೇಶ್ ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ ತಾಲ್ಲೂಕಿನಲ್ಲಿ ಪಕ್ಷ ಸಂಘಟನೆ ಉದ್ದೇಶದಿಂದ ಯುವಕರಿಗೆ ಆದ್ಯತೆ ನೀಡಿ ಜವಾಬ್ದಾರಿ ನೀಡಿದ್ದು ಮುಂಬರುವ ದಿನಗಳಲ್ಲಿ ಬೂತ್ ಮಟ್ಟದಿಂದ ಸ್ಥಳೀಯ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಗಳಲ್ಲಿ ಹೆಚ್ಚು ಸ್ಥಾನ ಗಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಶುಭಕೋರಿದರು.
ಅಧ್ಯಕ್ಷ ಮಂಜುನಾಥ್ ಮಾತನಾಡಿ ಪಕ್ಷ ವಹಿಸಿದ ಜವಾಬ್ದಾರಿ ಯಶಸ್ವಿಯಾಗಿ ನಿಭಾಯಿಸಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಪಟ್ಟಣ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಗೆ ಒತ್ತು ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಪುರಸಭಾ ಸದಸ್ಯ ರವಿ, ಕಾಂಗ್ರೆಸ್ ಜಿಲ್ಲಾ ಯುವ ಘಟಕ ಉಪಾಧ್ಯಕ್ಷ ರಘು, ತಾಲ್ಲೂಕು ಅಧ್ಯಕ್ಷ ಕೃಷ್ಣೇಗೌಡ, ಮಾಜಿ ಗ್ರಾ.ಪಂ ಸದಸ್ಯ ಶಿವಕುಮಾರ್, ಮುಖಂಡರಾದ ಎಸ್ ವಿ ಎಸ್ ಮಹೇಶ್, ರಾಜೇಶ್, ಮೋಹನ್, ಚೇತನ್ ಮತ್ತಿತರರಿದ್ದರು.