ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ಸತ್ಯಕ್ಕೆ ಸಂದ ಜಯ:ಶಾಸಕ ಅಲ್ಲಂಪ್ರಭು ಪಾಟೀಲ್

ಕಲಬುರಗಿ,ಆ.04: ಮೋದಿ ಉಪನಾಮದ ಬಗ್ಗೆ ರಾಹುಲ್ ಗಾಂಧಿ ಹೇಳಿಕೆ ಕುರಿತ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ವಿಧಿಸಿರುವ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಇದು ಸತ್ಯಕ್ಕೆ ಸಂದ ಜಯವೆಂದು ಕಲಬುರಗಿ ದಕ್ಷಿಣ ಶಾಸಕ ಅಲ್ಲಂಪ್ರಭು ಪಾಟೀಲ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಸದಾಕಾಲ ಮಹಾತ್ಮ ಗಾಂಧೀಜಿಯವರ ತತ್ವ ಸಿದ್ಧಾಂv ಪಾಲಿಸಿಕೊಂಡು ಹೊರಟಿದೆ. ಹೀಗಾಗಿ ಗಾಂಧೀಜಿ ತತ್ವಗಳಿಗೆ ಜಯ ಸಿಕ್ಕಂತಾಗಿದೆ ಎಂದೂ ಪಾಟೀಲರು ಹೇಳಿದ್ದಾರೆ.

ಗುಜರಾತ್ ಕೋರ್ಟ್ ತೀರ್ಪು ಕೊಟ್ಟಾಗ ಆತುರದಲ್ಲಿ ರಾಹುಲ್ ಗಾಂಧಿ ಅವರನ್ನು ತರಾತುರಿಯಲ್ಲಿ ಸಂಸದ ಸ್ಥಾನದಿಂದ ಕೈ ಬಿಡಲಾಗಿತ್ತು. ಎರಡು ವರ್ಷ ಜೈಲು ಶಿಕ್ಷೆ ನೀಡಿರುವುದರ ಹಿಂದೆ ದ್ವೇಷ ರಾಜಕಾರಣ ಅಡಗಿತ್ತು. ಇದಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿ ತೀರ್ಪು ನೀಡಿರುವುದು ರಾಹುಲ್ ಗಾಂಧಿ ಅವರನ್ನ ಅನರ್ಹ ಮಾಡಿದಂತಹ ಗುಜರಾತ್ ಮಾದರಿ ರಾಜಕೀಯದ ಮುಖವನ್ನ ಜನರ ಮುಂದೆ ತೆರೆದಿಟ್ಟಿದೆ ಎಂದು ಅಲ್ಲಂಪ್ರಭು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವಕ್ಕಾಗಿ ಆಗ್ರಹ ಮಾಡುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪೀಕರ್ ಒಳ್ಳೆಯ ಕ್ರಮ ವಹಿಸಲಿದ್ದಾರೆ ಎಂದು ಭಾವಿಸಿz್ದÉÃವೆ ಎಂದೂ ಶಾಸಕ ಅಲ್ಲಂಪ್ರಭು ವಿಶ್ವಾಸ ವ್ಯಕ್ತಪಡಿಸಿದ್ದಾರೆ.