
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಜು.05: ಎಐಸಿಸಿ ನಾಯಕ ಅವರ ಮೇಲಿನ ಮಾನನಷ್ಟ ಪ್ರಕರಣದ ಶಿಕ್ಷೆ ಆದೇಶಕ್ಕೆ ಸುಪ್ರೀಂ ಕೋರ್ಟ್ ನೀಡಿರುವ ತಡೆಯಾಜ್ಞೆ ಸ್ವಾಗತಾರ್ಹ ಎಂದು ಕಾಂಗ್ರೆಸ್ ಮುಖಂಡ ಬಿ.ಮುಂಡ್ರಿಗಿ ನಾಗಾರಜ್ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು. ಅದಾನಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪಾತ್ರವನ್ನು ಪ್ರಶ್ನಿಸಿರುವ ಕಾಂಗ್ರೆಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧೀಜಿ ಅವರ ಮೇಲೆ ಮಾನನಷ್ಟ ಮೊಕದ್ದಮೆಯಲ್ಲಿ ಕೆಳ ಹಂತದ ನ್ಯಾಯಾಲಯಗಳು ನೀಡಿದ ಶಿಕ್ಷೆಯಿಂದ ಸಂಸತ್ ಸದಸ್ಯತ್ವವನ್ನು ರದ್ದು ಮಾಡಿಸಿದ್ದು ಬಿಜೆಪಿಯ ಹುನ್ನಾರಕ್ಕೆ. ಸುಪ್ರೀಂಕೋರ್ಟಿನ ತಡೆಯಾಜ್ಞೆ ಭಾರೀ ಹಿನ್ನಡೆಯನ್ನುಂಟು ಮಾಡಿದೆ.
ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ನ ಜಿಲ್ಲಾ ಮತ್ತು ಹೈಕೋರ್ಟ್ ನೀಡಿದ್ದ 2 ವರ್ಷಗಳ ಜೈಲು ಶಿಕ್ಷೆ ಮತ್ತು ಸಂಸತ್ ಸದಸ್ಯತ್ವ ರದ್ದತಿಗೆ ನಿನ್ನೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು. ಇದು ಸತ್ಯಕ್ಕೆ ಜಯ ಸಿಕ್ಕಿದ್ದು ಸಂವಿಧಾನದ ಅಂಗಗಳಾದ ನ್ಯಾಯಾಂಗ, ಶಾಸಕಾಂಗ ಮತ್ತು ಕಾರ್ಯಾಂಗಗಳ ಮೇಲೆ ಸಂಪೂರ್ಣ ನಂಬಿಕೆ ಮತ್ತು ಭರವಸೆ ಇಟ್ಟಿರುವ ಕಾಂಗ್ರೆಸ್
ಪಕ್ಷಕ್ಕೆ ಮತ್ತಷ್ಟು ಶಕ್ತಿ ಸಿಕ್ಕಂತಾಗಿದೆ. ರಾಹುಲ್ ಗಾಂಧೀ ಅವರ ಸಂಸತ್ ಸ್ಥಾನ ಮರಳಲಿದೆ. ಇದು ಕೇವಲ ಅವರ ಗೆಲುವು ಮಾತ್ರವಲ್ಲದೆ ಸಂಪೂರ್ಣ ಪ್ರಜಾಪ್ರಭುತ್ವದ ಗೆಲುವಾಗಿದೆಂದು ನಾಗಾರಾಜ್ ಅಭಿಪ್ರಾಯಪಟ್ಟಿದ್ದಾರೆ.