ರಾಹುಲ್ ಜನ್ಮದಿನಕ್ಕೆ ರಮ್ಯಾ ಶುಭಾಶಯ

ಬೆಂಗಳೂರು.ಜೂ೨೦:ಸ್ಯಾಂಡಲ್‌ವುಡ್ ಪದ್ಮಾವತಿ ರಮ್ಯಾ ಅವರು ಸದ್ಯ ಲಂಡನ್‌ನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂಬರುವ ಸಿನಿಮಾಗಾಗಿ ಮತ್ತಷ್ಟು ಫಿಟ್, ಫೈನ್ ಆಗಬೇಕು ಅಂತಾ ತಯಾರಿಯಲ್ಲಿದ್ದಾರೆ. ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬಕ್ಕೆ ರಮ್ಯಾ ಸ್ಪೆಷಲ್ ಆಗಿ ವಿಶ್ ಮಾಡಿದ್ದಾರೆ. ಈ ಕುರಿತ ಪೋಸ್ಟ್ ಸದ್ಯ ಭಾರಿ ವೈರಲ್ ಆಗುತ್ತಿದೆ.
ಕನ್ನಡ ಚಿತ್ರರಂಗದಲ್ಲಿ ನಂಬರ್ ಒನ್ ನಟಿಯಾಗಿರುವಾಗಲೇ ರಾಜಕೀಯ ಅಖಾಡಕ್ಕೆ ಇಳಿದವರು ನಟಿ ರಮ್ಯಾ. ಸಿನಿಮಾ-ರಾಜಕೀಯ ಎರಡು ಕ್ಷೇತ್ರದಲ್ಲೂ ರಮ್ಯಾ ಗುರುತಿಸಿಕೊಂಡಿದ್ದಾರೆ. ಸದ್ಯ ರಾಜಕೀಯದಿಂದ ದೂರವಿದ್ರು ಕೂಡ ಕಾಂಗ್ರೆಸ್ ಪಕ್ಷದ ಜೊತೆ ರಮ್ಯಾಗೆ ಉತ್ತಮ ಒಡನಾಟವಿದೆ. ೫೩ನೇ ವಸಂತಕ್ಕೆ ಕಾಲಿಟ್ಟಿರುವ ರಾಹುಲ್ ಗಾಂಧಿ ಬರ್ತ್‌ಡೇಗೆ (ಜೂನ್ ೧೯) ವಿಶೇಷವಾಗಿ ರಮ್ಯಾ ಶುಭಕೋರಿದ್ದಾರೆ.
ನನ್ನ ಮುಖದಲ್ಲಿ ಮತ್ತೆ ನಗು ಮೂಡಿಸಿದ ವ್ಯಕ್ತಿ ಎಂದು ರಾಹುಲ್ ಗಾಂಧಿ ಅವರನ್ನು ರಮ್ಯಾ ಬಣ್ಣಿಸಿದ್ದಾರೆ. ಈ ಮೊದಲು ಕಾಂಗ್ರೆಸ್ ಪಕ್ಷದ ಐಟಿ ಸೆಲ್‌ನಲ್ಲಿ ರಮ್ಯಾ ಅವರು ಕೆಲಸ ಮಾಡಿ ಗಮನ ಸೆಳೆದಿದ್ದರು. ಕರುಣೆಯ ಕಣ್ಣುಗಳಿಂದ ಜಗತ್ತನ್ನು ನೋಡಲು ಕಲಿಸಿದವರು ಎಂದು ಕೂಡ ರಮ್ಯಾ ಹೇಳಿದ್ದಾರೆ. ಆ ಮೂಲಕ ಅವರ ರಾಹುಲ್ ಗಾಂಧಿಗೆ ಹುಟ್ಟುಹಬ್ಬದ ವಿಶ್ ಮಾಡಿದ್ದಾರೆ.