
ಬೆಂಗಳೂರು,ಮೇ.೩-ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಸಿ.ಶ್ರೀನಿವಾಸ್ ಅವರ ಪರವಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಭರ್ಜರಿ ಪ್ರಚಾರ ನಡೆಸಿದರು.
ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಸಿ.ಶ್ರೀನಿವಾಸ್ ಅವರು ಮಾತನಾಡಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ನನ್ನ ಪರವಾಗಿ ಪ್ರಚಾರ ಮಾಡಿರುವುದು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವನ್ನು ಖಚಿತಪಡಿಸಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಹಾಗೂ ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆ ಉಂಟಾಗಿದ್ದು,ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಹೆಚ್ಚು ಮತಗಳಿಂದ ಜಯಗಳಿಸಲಿದೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಹಲವು ಜನಪರ ಯೋಜನೆಗಳನ್ನು ಘೋಷಣೆಮಾಡಿದ್ದು, ಜಾರಿಗೊಳಿಸಲು ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬೆಲೆ ಏರಿಕೆ ನೀತಿಗೆ ಕಡಿವಾಣದ ಜೊತೆಗೆ ಸಮಗ್ರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವಂತೆ ಕೋರಿದರು.
ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದ್ದು, ಜನಪರ ಯೋಜನೆಗಳನ್ನು ಜಾರಿಗೆ ತರಲು ಹಾಗೂ ರಾಜ್ಯದ ಜನತೆಯ ಸಮಗ್ರ ಅಭಿವೃದ್ಧಿಗಾಗಿ, ಕಾಂಗ್ರೆಸ್ ಪಕ್ಷಕ್ಕೆ ಜನತೆ ಮತನೀಡುವ ಮೂಲಕ ಆಶೀರ್ವಾದ ಮಾಡುವಂತೆ ಮನವಿ ಮಾಡಿದರು.
ಈ ಬಾರಿ ಜನಪರ ಆಡಳಿತಕ್ಕೆ ಮತದಾರರು ಕಾಂಗ್ರೆಸ್ ಗೆಲುವಿಗೆ ಸಹಕರಿಸಲಿದ್ದಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.
ಪ್ರಚಾರದ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಉತ್ತಮ ಸ್ಪಂದನೆ ದೊರೆತಿದ್ದು,ಗೆಲುವಿನ ನಿರೀಕ್ಷೆ ಹೆಚ್ಚಿಸಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಮೇಯರ್ ಸಂಪತ್ ಕುಮಾರ್, ಮಾಜಿ ಪಾಲಿಕೆ ಸದಸ್ಯ ಎ.ಆರ್.ಜಾಕೀರ್ ಸೇರಿದಂತೆ ನೂರಾರು ಭಾಗವಹಿಸಿದ್ದರು.
ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಸಿ. ಶ್ರೀನಿವಾಸ್‌ರವರ ಪೆರಿಯಾರ್ ನಗರ ಸರ್ಕಲ್ ಬಳಿ ಪರ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿರವರು ಅಬ್ಬರದ ಪ್ರಚಾರ ನಡೆಸಿದರು. ಇದೇ ವೇಳೆ ರಾಹುಲ್ ಗಾಂಧಿರವರನ್ನು ಪಕ್ಷದ ಮುಖಂಡರು ಸನ್ಮಾನಿಸಿದರು. ಮಾಜಿ ಮೇಯರ್ ಆರ್. ಸಂಪತ್‌ರಾಜ್, ಮಾಜಿ ಪಾಲಿಕೆ ಸದಸ್ಯ ಎ.ಆರ್. ಜಾಕೀರ್, ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್, ಡಿಸಿಸಿ ಅಧ್ಯಕ್ಷ ರಾಜ್‌ಕುಮಾರ್ ಸೇರಿ ಹಲವಾರು ಮುಖಂಡರು ಭಾಗವಹಿಸಿದ್ದರು.